ನಮ್ಮಜನ.ಕಾಂ, ಚಿತ್ರದುರ್ಗ: ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯ (South East Teacher Election) ಮತ ಎಣಿಕೆ ಕಾರ್ಯ ಬೆಂಗಳೂರಿನಲ್ಲಿ ನಡೆಯುತ್ತಿದ್ದು 3ನೇ ಸುತ್ತಿನಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರು ಭಾರೀ ಮುನ್ನಡೆ ಸಾಧಿಸುವ ಮೂಲಕ ಮುನ್ನುಗುತ್ತಿದ್ದಾರೆ.
ಕಳೆದ ಮೂರು ಬಾರಿ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ (South East Teacher Election) ಸಾಕಷ್ಟು ಹಿಡಿತ ಹೊಂದಿದ್ದ ಬಿಜೆಪಿಗೆ ಈ ಬಾರಿ ಹಿನ್ನಡೆ ಆದಂತೆ ಕಾಣುತ್ತಿದೆ. ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಪಕ್ಷೇತರ ಅಭ್ಯರ್ಥಿ ವಿನೋದ್ ಶಿವರಾಜ್ ಅವರು 2441 ಮತಗಳನ್ನು ಪಡೆದರೆ ಅವರ ಪ್ರತಿಸ್ಪರ್ಧಿ ಡಿ.ಟಿ.ಶ್ರೀನಿವಾಸ್ ಅವರು 2270 ಮತಗಳನ್ನು ಪಡೆದಿದ್ದರು. ಹಾಲಿ ಸದಸ್ಯ ವೈ.ಎ.ನಾರಾಯಣಸ್ವಾಮಿ ಅವರು 1941 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ಕುಸಿದಿದ್ದರು.
ಇದನ್ನೂ ಓದಿ: Three house: ಮನೆಗಳು ನೆಲಕ್ಕುರುಳಿ ಲಕ್ಷಾಂತರ ರೂಪಾಯಿ ನಷ್ಟ, ಚಳ್ಳಕೆರೆ ಭರ್ಜರಿ ಮಳೆ
ಮೂರನೇ ಸುತ್ತಿನಲ್ಲೂ ಸಹ ಡಿ.ಟಿ.ಶ್ರೀನಿವಾಸ್ ಹೆಚ್ಚಿನ ಮತಗಳನ್ನು ಪಡೆಯುವ ಮೂಲಕ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಮೊದಲ ಸುತ್ತಿನಲ್ಲಿ ಅಭ್ಯರ್ಥಿಗಳು ಪಡೆದ ಮತಗಳು (South East Teacher Election)
- ಡಿ.ಟಿ.ಶ್ರೀನಿವಾಸ್ ಕಾಂಗ್ರೆಸ್- 2270
- ವೈ.ಎ.ನಾರಾಯಣಸ್ವಾಮಿ ಬಿಜೆಪಿ-1942
- ವಿನೋದ್ ಶಿವರಾಜ್ ಪಕ್ಷೇತರ- 2448
ಎರಡನೇ ಸುತ್ತಿನಲ್ಲಿ ಅಭ್ಯರ್ಥಿಗಳು ಪಡೆದ ಮತಗಳು (South East Teacher Election)
- ಡಿ.ಟಿ.ಶ್ರೀನಿವಾಸ್ ಕಾಂಗ್ರೆಸ್- 2900
- ವೈ.ಎ.ನಾರಾಯಣಸ್ವಾಮಿ ಬಿಜೆಪಿ-2443
- ವಿನೋದ್ ಶಿವರಾಜ್ ಪಕ್ಷೇತರ- 1270
ಮೂರನೇ ಸುತ್ತಿನಲ್ಲಿ ಅಭ್ಯರ್ಥಿಗಳು ಪಡೆದ ಮತಗಳು ಕ(South East Teacher Election)
- ಡಿ.ಟಿ.ಶ್ರೀನಿವಾಸ್ ಕಾಂಗ್ರೆಸ್- 2769
- ವೈ.ಎ.ನಾರಾಯಣಸ್ವಾಮಿ ಬಿಜೆಪಿ-1972
- ವಿನೋದ್ ಶಿವರಾಜ್ ಪಕ್ಷೇತರ- 1853
ಕಾಂಗ್ರೆಸ್ ಅಭ್ಯರ್ಥಿ ಲೀಡ್: 1582
ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಮ್ಮದೇ ಎಂದು ಹೇಳಿತ್ತು ಮತ್ತು ಕಾಂಗ್ರೆಸ್ ಸಹ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಪತಿ ಡಿ.ಟಿ.ಶ್ರೀನಿವಾಸ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆ ತಂದು ಅಭ್ಯರ್ಥಿ ಮಾಡಿತ್ತು. ಆದರೆ ಯಾರು ಗೆಲುವು ಸಾಧಿಸುತ್ತಾರೆ ಎಂಬುದನ್ನು (South East Teacher Election) ಕಾದು ನೋಡಬೇಕಿದೆ.