Chitradurga news|nammajana.com|20-11-2024
ನಮ್ಮಜನ.ಕಾಂ, ಚಿತ್ರದುರ್ಗ: ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಇದೇ ನ.25ರಂದು ಬೆಳಿಗ್ಗೆ 10ಕ್ಕೆ ನಗರದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ವಿಶೇಷಚೇತನರಿಗೆ ಜಿಲ್ಲಾ ಮಟ್ಟದಲ್ಲಿ ಕ್ರೀಡಾ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು (Sports event) ಆಯೋಜಿಸಲಾಗಿದೆ.
ಕ್ರೀಡಾ ಸ್ಪರ್ಧೆ ವಿಭಾಗದಲ್ಲಿ 18ವರ್ಷ ಮೇಲ್ಪಟ್ಟ ಶ್ರವಣ ದೋಷ ಮತ್ತು ದೈಹಿಕ ವಿಕಲಚೇತರಿಗೆ 100ಮೀ ಓಟ, ಗುಂಡು ಎಸೆತ, ಜಾವಲಿನ್ ಥ್ರೋ ಮತ್ತು ಬುದ್ದಿಮಾಂದ್ಯರಿಗೆ 100ಮೀ ಓಟ, (Sports event) ಬಕೆಟ್ನಲ್ಲಿ ರಿಂಗ್ ಎಸೆತ, ಮ್ಯೂಜಿಕಲ್ ಚೇರ್ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಅಂಧ ವಿಶೇಷಚೇತನರಿಗೆ ಮಡಿಕೆ ಹೊಡೆಯುವುದು, ಕೇನ್ ರೇಸ್ ಆಯೋಜಿಸಲಾಗಿದೆ. (Sports event)
ಸಾಂಸ್ಕøತಿಕ ಸ್ಪರ್ಧೆ ವಿಭಾಗದಲ್ಲಿ 18 ವರ್ಷ ಮೇಲ್ಪಟ್ಟ ದೃಷ್ಟಿದೋಷ, ದೈಹಿಕ ಮತ್ತು ಬೌದ್ಧಿಕ ವಿಕಲತೆ ವಿಕಲಚೇತನರಿಗೆ ಜಾನಪದ ಗೀತೆ, ಭಾವಗೀತೆ, ಭಕ್ತಿಗೀತೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಇದನ್ನೂ ಓದಿ: ವಾಣಿ ವಿಲಾಸ ಸಾಗರ ಭರ್ತಿಗೆ 1.80 ಅಡಿ ಮಾತ್ರ ಬಾಕಿ | ಇಂದಿನ ನೀರಿನ ಮಟ್ಟ ಎಷ್ಟಿದೆ? | Vani Vilasa SagaraSagara
ಆಸಕ್ತ ವಿಶೇಷಚೇತನರು ನಗರದ ಒನಕ ಓಬವ್ವ (Sports event) ಕ್ರೀಡಾಂಗಣದಲ್ಲಿ ನಡೆಯುವ ಜಿಲ್ಲಾ ಮಟ್ಟದ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಭಾಗವಹಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.