Chitradurga news|nammajana.com|02-05-2025
ನಮ್ಮಜನ.ಕಾಂ, ಚಿತ್ರದುರ್ಗ: ಸತತ ನಾಲ್ಕನೇ ಬಾರಿ ಶೇಕಡ 100% ಫಲಿತಾಂಶದ ಪಡೆದ ವಸತಿ ಶಾಲೆ ಸಿರಿಗೆರೆ ಸಮೀಪದ ಕಡ್ಲೆಗುದ್ದು ಗ್ರಾಮದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶ್ರೀಮತಿ (SSLC Result 2025) ಇಂಧಿರಾಗಾಂಧಿ ವಸತಿ ಶಾಲೆ(ಪ.ಜಾತಿ)ಯಲ್ಲಿ 2024-25ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಎಲ್ಲ 46 ವಿದ್ಯಾರ್ಥಿಗಳು ಮಾರ್ಚ್ /ಏಪ್ರಿಲ್-2025ರ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ಉತ್ತೀರ್ಣರಾಗುವ ಮೂಲಕ ಸತತ ನಾಲ್ಕನೇ ಬಾರಿ ಶೇಕಡ 100% ಫಲಿತಾಂಶ ಪಡೆದ ಶ್ರೇಯಕ್ಕೆ ಪಾತ್ರರಾಗಿದ್ದಾರೆ.
ಅತ್ಯುನ್ನತ ಶ್ರೇಣಿಯಲ್ಲಿ 18 ವಿದ್ಯಾರ್ಥಿಗಳು, ಪ್ರಥಮ ಶ್ರೇಣಿಯಲ್ಲಿ 25 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ದ್ವಿತೀಯ ಶ್ರೇಣಿಯಲ್ಲಿ 3 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ವಿನಯ್ ಕೆ 616, ಲೀಲಾವತಿ ಜಿ 591, ದೇವರಾಜ ಸಿ ರವರು 589, ಪ್ರಜ್ವಲ್ ಎಸ್.ವಿ 589, ಕಾರ್ತಿಕ್ ಆರ್ 584 ಅಂಕಗಳನ್ನು ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಯ ಕ್ರೈಸ್ ವ್ಯಾಪಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಯು 2017-18ನೇ ಸಾಲಿನಲ್ಲಿ ಆರಂಭವಾಗಿದ್ದು, 2022-23ನೇ ಸಾಲಿನಲ್ಲಿ ಕಡ್ಲೆಗುದ್ದುವಿನಲ್ಲಿ 9ಎಕರೆ ವಿಸ್ತೀರ್ಣ ಜಾಗದಲ್ಲಿ ಅತ್ಯಾಧುನಿಕ ಸಕಲ ಸೌಕರ್ಯಗಳನ್ನು ಹೊಂದಿರುವ ಅತ್ಯಾಕರ್ಷಕ ಕ್ಯಾಂಪಸ್ ನಿರ್ಮಿಸಲಾಗಿರುತ್ತದೆ. ಶೈಕ್ಷಣಿಕ ವಿಭಾಗ, ವಿದ್ಯಾರ್ಥಿ ಮತ್ತು (SSLC Result 2025) ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಸತಿ ನಿಲಯ, ಭೋಜನ ಶಾಲೆ, ಪ್ರಾಂಶುಪಾಲರ ವಸತಿ ಗೃಹ ಹಾಗೂ ಬೋಧಕ, ಬೋಧಕೇತರ ವಸತಿ ಗೃಹಗಳನ್ನು ನಿರ್ಮಿಸಲಾಗಿರುತ್ತದೆ.
ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳನ್ನು ಪ್ರವೇಶ ಪರೀಕ್ಷೆಯ ಮೂಲಕ 6ನೇ ತರಗತಿಗೆ ದಾಖಲಿಸಿಕೊಂಡು 10ನೇ ತರಗತಿಯವರೆಗೆ ವಿದ್ಯಾಭ್ಯಾಸ ನೀಡಲಾಗುತ್ತದೆ. ಪ್ರಸ್ತುತ 246 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ಸರ್ಕಾರದ ಆದೇಶದಂತೆ ಪ್ರವೇಶ, ಶಿಕ್ಷಣ, ವಸತಿ, ಊಟೋಪಚಾರದ ವ್ಯವಸ್ಥೆ ಮಾಡಲಾಗುತ್ತಿದೆ ಮತ್ತು ಎಲ್ಲ ವಿದ್ಯಾರ್ಥಿಗಳಿಗೆ ಉಚಿತವಾಗಿ ಮೂರು ಜೊತೆ ಸಮವಸ್ತ್ರ, ಎರಡು ಜೊತೆ ಶೂ, ಪಠ್ಯಪುಸ್ತಕ, ನೋಟ್ ಬುಕ್ ಹಾಗೂ ಲೇಖನ ಸಾಮಗ್ರಿಗಳನ್ನು ಒದಗಿಸಲಾಗುತ್ತಿದೆ.
ಕಂಪ್ಯೂಟರ್ ಮತ್ತು ಡ್ರಾಯಿಂಗ್ ಶಿಕ್ಷಣ ಕಲಿಸಲಾಗುತ್ತಿದೆ. ವಿವಿಧ ಎನ್‍ಜಿಓಗಳ ಸಹಕಾರದೊಂದಿಗೆ ವಿದ್ಯಾರ್ಥಿಗಳನ್ನು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿ ವಿದ್ಯಾರ್ಥಿಗಳ ಸರ್ವಾಂಗೀಣ ವ್ಯಕ್ತಿತ್ವ ರೂಪಿಸಲು ಶ್ರಮಿಸಲಾಗುತ್ತದೆ. ಸರ್ಕಾರ ಮತ್ತು ಕ್ರೈಸ್ ಕೇಂದ್ರ ಕಛೇರಿಯ ಉನ್ನತ ಅಧಿಕಾರಗಳು ಹಾಗೂ ಜಂಟಿ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಚಿತ್ರದುರ್ಗ ಇವರ ಮಾರ್ಗದರ್ಶನ ಮತ್ತು ಆದೇಶದಂತೆ ಜೂನ್ (SSLC Result 2025) ಮಾಹೆಯಿಂದಲೆ ಉತ್ತಮ ಫಲಿತಾಂಶ ಪಡೆಯಲು ವಿವಿಧ ಕಾರ್ಯಕ್ರಮಗಳನ್ನು ರೂಪಿಸಿ, ವಿದ್ಯಾರ್ಥಿಗಳನ್ನು ಪಠ್ಯ ಮತ್ತು ಪಠ್ಯೇತರ ಚಟುವಟಿಯಲ್ಲಿ ತೊಡಗಿಸಿದ್ದರಿಂದ ಈ ಫಲಿತಾಂಶ ಪಡೆಯಲು ಸಾಧ್ಯವಾಗಿದೆ ಎಂದು ಪ್ರಾಂಶುಪಾಲ ರಮೇಶ್ ಆರ್ ಅಭಿಪ್ರಾಯ ಪಟ್ಟಿದ್ದಾರೆ.
ಇದನ್ನೂ ಓದಿ: Chitradurga | SSLC ಫಲಿತಾಂಶ ಪ್ರಕಟ, ಚಿತ್ರದುರ್ಗ 23 ಸ್ಥಾನಕ್ಕೆ ಕುಸಿತ
ಇಂತಹ ಫಲಿತಾಂಶ ಮಾರ್ಗದರ್ಶನ ಮಾಡಿದ ಎಲ್ಲ ಮೇಲಾಧಿಕಾರಿಗಳಿಗೆ ಧನ್ಯವಾದಗಳನ್ನು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳಿಗೆ ಶುಭಾಷಯಗಳನ್ನು ಕೋರಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252