
Chitradurga news | nammajana.com | 7-03-2025
ನಮ್ಮಜನ.ಕಾಂ, ಚಿತ್ರದುರ್ಗ: ರಾಜ್ಯ ಸರ್ಕಾರ ಜನರ ನಿರೀಕ್ಷೆಯ ಬಜೆಟ್ ಘೋಷಣೆ ಆಗಿದ್ದು ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಕನಸಿನ ಅಪ್ಪರ್ ಭದ್ರಾ ಯೋಜನಗೆ ಸರ್ಕಾರ ಹಣವನ್ನು (State budget-2025) ಒದಗಿಸುವ ಮೂಲಕ ರೈತರ ಮೊಗದಲ್ಲಿ ಸಂತಸ ಮನೆ ಮಾಡುವಂತೆ ಮಾಡಿದೆ.
ಕೋಟೆ ನಾಡು ಚಿತ್ರದುರ್ಗ ಜಿಲ್ಲೆಗೆ ದೊರಕಿರುವ ಯೋಜನೆಗಳ ಮಾಹಿತಿ
- ಭದ್ರಾ ಮೇಲ್ದಂಡೆ ಯೋಜನೆಗೆ 2023-24ರ ಕೇಂದ್ರ ಸರ್ಕಾರದ ಆಯವ್ಯಯದಲ್ಲಿ ಘೋಷಿಸಿದ 5,300 ಕೋಟಿ ರೂ. ಅನುದಾನ ಇನ್ನೂ (State budget-2025) ಬಿಡುಗಡೆಯಾಗಿರುವುದಿಲ್ಲ. ಆದರೂ, ರಾಜ್ಯ ಸರ್ಕಾರವು ಅಗತ್ಯ ಅನುದಾನವನ್ನು ಒದಗಿಸಿ ಈ ಯೋಜನೆಯನ್ನು ಪೂರ್ಣಗೊಳಿಸಲು ಕ್ರಮವಹಿಸುತ್ತಿದೆ. ತರೀಕೆರೆ ಏತ ನೀರಾವರಿ ಯೋಜನೆಯಡಿ 79 ಕೆರೆಗಳನ್ನು ತುಂಬಿಸುವ ಮೂಲಕ 49,790 ಎಕರೆ ಸೂಕ್ಷ್ಮ ನೀರಾವರಿ ಸಾಮರ್ಥ್ಯ ಕಲ್ಪಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 2,611 ಕೋಟಿ ರೂ. ಅಂದಾಜು ಮೊತ್ತದ ಚಿತ್ರದುರ್ಗ ಶಾಖಾ ಕಾಲುವೆ ಕಾಮಗಾರಿಗಳನ್ನು ಪೂರ್ಣಗೊಳಿಸುವ ಮೂಲಕ ಹೊಸದುರ್ಗ, ಹೊಳಲ್ಕೆರೆ, ಜಗಳೂರು, ಮೊಳಕಾಲ್ಮೂರು, ಚಳ್ಳಕೆರೆ ಮತ್ತು ಪಾವಗಡ ತಾಲ್ಲೂಕುಗಳಲ್ಲಿನ 30 ಕೆರೆಗಳನ್ನು ತುಂಬಿಸಿ ಒಂದು ಲಕ್ಷದ ಎಪ್ಪತ್ತೇಳು ಸಾವಿರ ಎಕರೆ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಸಾಮರ್ಥ್ಯವನ್ನು ಕಲ್ಪಿಸಲಾಗುವುದು.
- ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ 200 ಹಾಸಿಗೆ ಹಾಗೂ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು.
ಇದನ್ನೂ ಓದಿ: JOB NEWS | ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ
- ಕೋಲಾರ, ರಾಮನಗರ, ಚಿತ್ರದುರ್ಗ ಮತ್ತು (State budget-2025) ವಿಜಯನಗರ ಜಿಲ್ಲೆಗಳಲ್ಲಿ ಹೊಸ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಒಂಭತ್ತು ಕೋಟಿ ರೂ. ಒದಗಿಸಿದೆ.
-
ರಾಜ್ಯದಲ್ಲಿ ವಾಹನ ಸಂಚಾರವನ್ನು ಮೇಲ್ವಿಚಾರಣೆ ಮಾಡಲು ಮತ್ತು ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಪತ್ತೆ ಹಚ್ಚಿ ನಿಯಂತ್ರಿಸಲು ಚಿತ್ರದುರ್ಗ AI ಆಧಾರಿತ ವಿದ್ಯುನ್ಮಾನ ಕ್ಯಾಮರಾಗಳನ್ನು ಅಳವಡಿಸಲಾಗುವುದು.
