Chitradurga news | nammajana.com | 27-07-2025
ನಮ್ಮಜನ.ಕಾಂ, ಚಿತ್ರದುರ್ಗ: ಕೇಂದ್ರ ಸರ್ಕಾರ ರಾಜ್ಯ(State government)ಕ್ಕೆ ಅಗತ್ಯವಾಗುವ ಯೂರಿಯಾ ರಸಗೊಬ್ಬರ ವಿಲೇವಾರಿ ಮಾಡುತ್ತಿದೆ. ಆದರೆ ರಾಜ್ಯ ಸರ್ಕಾರ ಸರಿಯಾದ ರೀತಿಯಲ್ಲಿ ವಿತರಣೆ ಮಾಡದೇ ರಸ ಗೊಬ್ಬರವನ್ನು ತಯಾರಿಕೆ ಮಾಡುವಂತಹ ಕೈಗಾರಿಕೆಗಳಿಗೆ ಅಕ್ರಮವಾಗಿ ಮಾರಾಟ ಮಾಡುವವರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ರಾಜ್ಯದಲ್ಲಿ ಯೂರಿಯಾ ಗೊಬ್ಬರದ ಅಭಾವ ಸೃಷ್ಟಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಆರೋಪಿಸಿದ್ದಾರೆ.
ಇದನ್ನೂ ಓದಿ: ಸಾಧನೆಗೆ ಬದ್ಧತೆ ಮತ್ತು ಕಠಿಣ ಪರಿಶ್ರಮ ಅತ್ಯಗತ್ಯ: MC ರಘುಚಂದನ್

ಇಲ್ಲಿನ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಮಾರ್ಚ್-ಏಪ್ರಿಲ್ ತಿಂಗಳಲ್ಲಿಯೇ ನಮ್ಮ ರಾಜ್ಯಕ್ಕೆ ಇಷ್ಟೇ ಪ್ರಮಾಣದ ಅಗತ್ಯತೆ ಇದೆ ಎಂದು ಪತ್ರ ಬರೆಯುವುದರ ಮೂಲಕ ಅದರ ಬಿಡುಗಡೆಗೆ ಅಗತ್ಯವಾದಂತಹ ಹಣ ಸಹ ನೀಡಬೇಕು.
ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಇದಕ್ಕೆ ಒಂದು ಸಾವಿರ ಕೋಟಿ ರೂ. ನೀಡಲಾಗಿತ್ತು. ಆದರೆ ಈಗಿನ ಸಿದ್ದರಾಮಯ್ಯನವರ ಸರ್ಕಾರ ಕೇವಲ 400 ಕೋಟಿ ರೂ. ಮಾತ್ರ ನೀಡಿ, ಉಳಿದಂತಹ 600 ಕೋಟಿ ರೂಗಳಿಗೆ ಖಾಸಗಿ ಕಂಪನಿಗಳಿಗೆ ಅನುಕೂಲವಾಗುವಂತಹ ವಾತಾವರಣ ಕಲ್ಪಿಸಿದೆ ಎಂದು ದೂರಿದರು.
ರಾಜ್ಯದಲ್ಲಿನ ಕಾಂಗ್ರೆಸ್(State government) ಸರ್ಕಾರ ರೈತ ವಿರೋಧಿ ಸರ್ಕಾರವಾಗಿದೆ. ರೈತರ ಬಗ್ಗೆ ಎಳ್ಳಷ್ಟು ಸಹ ಕಾಳಜಿ ವಹಿಸುತ್ತಿಲ್ಲ. ತಮ್ಮ ಅಧಿಕಾರ ಕುರ್ಚಿ ಉಳಿವಿಗಾಗಿ ಹಲವಾರು ಭಾರಿ ದೆಹಲಿ ಪ್ರವಾಸ ಮಾಡಿರುವ ಸಿದ್ದರಾಮಯ್ಯರವರು, ಇದರಲ್ಲಿ ಒಂದು ಬಾರಿಯೂ ಸಹ ಕೇಂದ್ರ ಕೃಷಿ ಸಚಿವರನ್ನಾಗಲೀ, ಸಂಬಂಧಪಟ್ಟ ಅಧಿಕಾರಿಗಳನ್ನಾಗಲೀ ಭೇಟಿ ಮಾಡಿ ನಮ್ಮ ರಾಜ್ಯಕ್ಕೆ ಯೂರಿಯಾ ಗೊಬ್ಬರ ಬಗ್ಗೆ ಬೇಡಿಕೆ ಇಟ್ಟಿಲ್ಲ.
ಇದನ್ನೂ ಓದಿ: ವಾಣಿ ವಿಲಾಸ ಸಾಗರ ಹೊರ ಹರಿವು ಹೆಚ್ಚಳ
ಇಂದಿನ ದಿನಮಾನಗಳಲ್ಲಿ ಏಕಕಾಲದಲ್ಲಿ ಮಳೆ ವ್ಯಾಪಿಸಿದೆ. ರೈತರೆಲ್ಲರೂ ಸಹ ಬಿತ್ತನೆ ಕಾರ್ಯ ಪ್ರಾರಂಭ ಮಾಡಿದ್ದಾರೆ. ಎಲ್ಲಾ ರೈತರಿಗೂ ಯೂರಿಯಾ ಗೊಬ್ಬರದ ಅವಶ್ಯಕತೆಯಿದೆ. ಇದರ ಬಗ್ಗೆ ಗಮನಹರಿಸಿದ ಸಿದ್ದರಾಮಯ್ಯರವರು ತಮ್ಮ ಕುರ್ಚಿ ಉಳಿವಿಕೆಗಾಗಿ ಗಮನ ನೀಡಿದ್ದಾರೆ ಹೊರತು ಅನ್ನದಾತರ ಬಗ್ಗೆ ಯಾವುದೇ ಗಮನ ನೀಡಿಲ್ಲ ಎಂದರು.
ಮುಖ್ಯಮಂತ್ರಿಯವರ(State government) ತಪ್ಪಿನಿಂದಾಗಿ ನಾಡಿನ ರೈತರು ಕಷ್ಟಕ್ಕೆ ಸಿಲುಕ ಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಆಗಸ್ಟ್ 11ರಿಂದ ನಡೆಯುವಂತಹ ವಿಧಾನಸಭೆಯ ಅಧಿವೇಶನದಲ್ಲಿ ಇದರ ಬಗ್ಗೆ ಪೂರ್ಣ ಪ್ರಮಾಣದಲ್ಲಿ ಚರ್ಚೆ ಮಾಡಿ ಮುಖ್ಯಮಂತ್ರಿಗಳ, ಕೃಷಿ ಸಚಿವರ ರಾಜೀನಾಮೆಗೆ ಒತ್ತಾಯಿಸಲಾಗುವುದು.
ಧರ್ಮಸ್ಥಳ ಪ್ರಕರಣದಲ್ಲಿ SIT ತಂಡ ರಚನೆಗೆ ಮಾಡಿರುವುದು ಸ್ವಾಗತಾರ್ಹ :
ಧರ್ಮಸ್ಥಳದಲ್ಲಿ ನಡೆದಿರುವಂತಹ ಕೊಲೆಗಳಿಗೆ ಸಂಬಂಧಪಟ್ಟಂತೆ ಎಸ್‍ಐಟಿ ಸಮಿತಿ ರಚಿಸಿರುವುದು ಸ್ವಾಗತಾರ್ಹ ಎಂದು ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ತಿಳಿಸಿದರು.
ಇದನ್ನೂ ಓದಿ: ಸಮೃದ್ಧಿ ಮಳೆ, ಬೆಳೆಗಳಿಗೆ ಬೇಕಾದ ಯೂರಿಯಾ ಇಲ್ಲ, ಸರ್ಕಾರದ ವಿರುದ್ದ ರೈತರ ಅಕ್ರೋಶ
ತನಿಖೆ ನೆಪದಲ್ಲಿ ಧರ್ಮಸ್ಥಳದ ದೇವಸ್ಥಾನಕ್ಕಾಗಲೀ, ಅದರ ಮುಖಂಡರಿಗಾಗಲೀ ಅಪಮಾನ ಮಾಡುವುದು ಸರಿಯಲ್ಲ ಎಂದರು.
ಧರ್ಮಸ್ಥಳ(State government) ಧಾರ್ಮಿಕ ಸಂಸ್ಥೆ. ರಾಜ್ಯದಲ್ಲಿ ಈಗಾಗಲೇ ಹಲವಾರು ವಿವಿಧ ಉತ್ತಮ ಕಾರ್ಯಗಳನ್ನು ಮಾಡಿದೆ, ಹಲವಾರು ಬಡಜನತೆಗೆ ನೆರವಾಗಿದೆ. ಅಲ್ಲಿ ನಡೆದಿರುವಂತಹ ಕೊಲೆಯಾಗಲೀ, ಆತ್ಮಹತ್ಯೆಯಂತಹ ಪ್ರಕರಣಗಳ ಬಗ್ಗೆ ಪೂರ್ಣ ಪ್ರಮಾಣದ ತನಿಖೆಯಾಗಲಿ. ಆದರೆ ಇದನ್ನ ನೆಪವಾಗಿಟ್ಟುಕೊಂಡು ಧರ್ಮಸ್ಥಳದ ದೇವಸ್ಥಾನದ ಮೇಲೆ ವಿನಹ ಕಾರಣ ಅಪವಾದ ಮಾಡುವುದು, ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ತಿಳಿಸಿದರು.
ಇದನ್ನೂ ಓದಿ: ರಾಜ್ಯ ಮಟ್ಟದ ಟೇಕ್ವಾಂಡೋ ವಿಜೇತರಿಗೆ ಸನ್ಮಾನಿಸಿದ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ
ತನಿಖೆ ನ್ಯಾಯಯುತವಾಗಿ ನಡೆಯಲಿ, ತಪ್ಪಿತಸ್ಥರಿಗೆ ಕಠಿಣವಾದ ಶಿಕ್ಷೆಯಾಗಲಿ. ಇದಕ್ಕೆ ನಮ್ಮ ಪೂರ್ಣ ಬೆಂಬಲವಿದೆ ಎಂದರು.
ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಖಂಜಾಚಿ ಮಾಧುರೀ ಗೀರೀಶ್, ಉಪಾಧ್ಯಕ್ಷ ಮೋಹನ್, ರಾಜ್ಯ ರೈತ ಮೋರ್ಚಾದ ಕಾರ್ಯದರ್ಶಿ ಮಲ್ಲಿಕಾರ್ಜನ್, ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ವೆಂಕಟೇಶ್ ಯಾದವ್, ವಕ್ತಾರ ನಾಗರಾಜ್ ಬೇಂದ್ರೆ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252