Chitradurga news|nammajana.com|4-7-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಅವರಿಗೆ ರಾಜ್ಯಮಟ್ಟದ ಶ್ರೇಷ್ಠ (State level excellence RCH award) ಆರ್ಸಿಹೆಚ್ ಅಧಿಕಾರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಜುಲೈ 1ರಂದು ಬೆಂಗಳೂರಿನ ವಿಧಾನಸೌಧದ ಕೊಠಡಿ ಸಂಖ್ಯೆ 334ರಲ್ಲಿ ನಡೆದ ಆರೋಗ್ಯ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ (State level excellence RCH award) ಪ್ರಯುಕ್ತ ಚಿತ್ರದುರ್ಗ ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಅವರಿಗೆ ತಾಯಿ ಮಕ್ಕಳ ವಿಭಾಗದ ಉತ್ತಮ ಸಾಧನೆಗಾಗಿ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿಗೆ ಭಾಜನರಾದ ಡಾ.ಡಿ.ಎಂ.ಅಭಿನವ್ ಅವರಿಗೆ (State level excellence RCH award) ಮುಖ್ಯಮಂತ್ರಿ ಸಿದ್ದರಾಮಯ್ಯ, ಆರೋಗ್ಯ ಸಚಿವರು, ಇಲಾಖೆ ಮುಖ್ಯಸ್ಥರು ಶುಭ ಕೋರಿದರು.