Chitradurg News| Nammajana.com| April-19
ನಮ್ಮ ಜನ.ಕಾಂ ಚಿತ್ರದುರ್ಗ :ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ-2024ರ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ದೆ (1000 ಪದಗಳಿಗೆ ಮೀರದಂತೆ) ಹಾಗೂ ಪದವಿ ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ.
“ಭೂಮಿ ಮತ್ತು ಮಣ್ಣಿನ ಮೇಲೆ ಹವಾಮಾನ ಬದಲಾವಣೆಯ ಪರಿಣಾಮಗಳು” (Impacts of Climate Change on Soil and Land) ಎಂಬ ಶೀರ್ಷಿಕೆಯಡಿಯಲ್ಲಿ ಸ್ಪರ್ಧೆ ನಡೆಸಲಾಗುತ್ತಿದ್ದು, ಪ್ರಬಂಧಗಳನ್ನು ಕಳುಹಿಸಲು ಮೇ 27 ಕೊನೆಯ ದಿನವಾಗಿದೆ.
ರಸಪ್ರಶ್ನೆ ಸ್ಪರ್ಧೆಗೆ (ಇಬ್ಬರ ವಿದ್ಯಾರ್ಥಿಗಳ ಟೀಂ) ಭಾಗವಹಿಸಲು ಬಯಸುವ ವಿದ್ಯಾರ್ಥಿಗಳು ಮೇ 27ರೊಳಗೆ ಅಕಾಡೆಮಿಯ ಇ-ಮೇಲ್ ksta.gok@gmail.com ಮೂಲಕ ನೊಂದಾಯಿಸಿಕೊಳ್ಳಬಹುದು. ರಸಪ್ರಶ್ನೆ ಸ್ಪರ್ಧೆಯನ್ನು ಜೂನ್ 6ರಂದು ಅಕಾಡೆಮಿಯ ಸಭಾಂಗಣದಲ್ಲಿ ನಡೆಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‍ಸೈಟ್ https://kstacademy.inವೀಕ್ಷಿಸಬಹುದು ಅಥವಾ ಅಕಾಡೆಮಿಯ ಹಿರಿಯ ವೈಜ್ಞಾನಿಕಾಧಿಕಾರಿ ಡಾ.ಆರ್.ಆನಂದ್ ದೂರವಾಣಿ ಸಂಖ್ಯೆ 9880405181 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ.ಎಂ.ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಆಶ್ರಮದಲ್ಲಿ ತಾಯಿ-ಮಗಳ ಆತ್ಮಹತ್ಯೆ| ನೀರಿನ ತೊಟ್ಟಿಯಲ್ಲಿ ಮೃತದೇಹ ಪತ್ತೆ

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252