Chitradurga News | Nammajana.com |13-09-2025
ನಮ್ಮಜನ ನ್ಯೂಸ್ ಕಾಂ, ಚಿತ್ರದುರ್ಗ: ಮಹಿಳಾ(Survey) ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಸೆ.15 ರಿಂದ 45 ದಿನಗಳ ಕಾಲ ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಮರುಸಮೀಕ್ಷೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಚಿತ್ರದುರ್ಗ Sobhayatre ಮೆರವಣಿಗೆ | ಒಂದು ಗಾಡಿಗೆ ಎಷ್ಟು ಸ್ಪೀಕರ್ ಬಳಕೆ, ಇಲ್ಲಿದೆ ಮಾಹಿತಿ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಮೀಕ್ಷೆ ಕುರಿತಾದ ಪೋಸ್ಟರ್‍ಗಳನ್ನು ಬಿಡುಗಡೆಗೊಳಿಸುವ ಮೂಲಕ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಿದರು.
ಲಿಂಗತ್ವ ಅಲ್ಪಸಂಖ್ಯಾತರು, ಮಾಜಿ ದೇವದಾಸಿಯರು ಹಾಗೂ ಅವರ ಅವಲಂಬಿತ ಮಕ್ಕಳ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಿ, ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಪುರ್ನವಸತಿ ಕಲ್ಪಿಸಲು ಸಮೀಕ್ಷೆ ನಡೆಸಲಾಗುತ್ತಿದೆ. ಸಂಬಂಧಪಟ್ಟವರು ಸಮೀಕ್ಷೆಯಿಂದ ಹೊರಗುಳಿಯಬಾರದು.
ಸಮೀಕ್ಷೆ ನಡೆಸಲು ಈಗಾಗಲೇ ಅಗತ್ಯ ಇರುವ ಪೂರ್ವ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ. ಸಮೀಕ್ಷೆಯನ್ನು ಸೆ. 15 ರಿಂದ ಆರಂಭಿಸಿ 45 ಕಚೇರಿ ಕೆಲಸದ ದಿನಗಳಲ್ಲಿ ಮುಕ್ತಾಯಗೊಳಿಸಲಾಗುವುದು.
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಗೆ ‘ಏಂಖಒಂಓI’ ತಿeb ಚಿಠಿಠಿಟiಛಿಚಿಣioಟಿ ಸಿದ್ದಪಡಿಸಲಾಗಿದೆ. ಲಿಂಗತ್ವ ಅಲ್ಪಸಂಖ್ಯಾತರ ಸಮುದಾಯದವರ ಮೂಲಕವೇ ಸಮೀಕ್ಷೆ ಕಾರ್ಯ ಕೈಗೊಳ್ಳುತ್ತಿರುವುದು ಈ ಸಮೀಕ್ಷೆಯ ವಿಶೇಷತೆಯಾಗಿದೆ. ಸೆ.15 ರಿಂದ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಸಮೀಕ್ಷೆದಾರರು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯ ವರೆಗೆ ಸಮೀಕ್ಷೆ ಕಾರ್ಯ ನಿರ್ವಹಿಸಲಿದ್ದು, ಲಿಂಗತ್ವ ಅಲ್ಪಸಂಖ್ಯಾತರು ಯಾವುದೇ ಗೊಂದಲಗಳಿಗೆ ಒಳಗಾಗದೇ ಸ್ಪಷ್ಟ ಹಾಗೂ ನಿಖರ ಮಾಹಿತಿಯನ್ನು ನೀಡಬೇಕು.
ಮಾಜಿ ದೇವದಾಸಿ ಮಹಿಳೆಯರ ಸಮೀಕ್ಷೆ :
ಮಾಜಿ ದೇವದಾಸಿ ಮಹಿಳೆಯರು ಹಾಗೂ ಅವರ ಅವಲಂಬಿತ ಮಕ್ಕಳ ಸಮೀಕ್ಷೆ ಸೇವಾಸಿಂಧು ಮೂಲಕ ನಡೆಯಲಿದ್ದು, ಇದಕ್ಕಾಗಿ ವೆಬ್ ಅಪ್ಲೀಕೇಷನ್ ಸಿದ್ದಪಡಿಸಲಾಗಿದೆ. ಸೆ.15 ರಿಂದ ಎಲ್ಲಾ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಸಮೀಕ್ಷೆದಾರರು ಬೆಳಿಗ್ಗೆ 9 ರಿಂದ ಸಂಜೆ 5.30 ಗಂಟೆಯ ವರೆಗೆ ಸಮೀಕ್ಷೆ ಕಾರ್ಯ ನಿರ್ವಹಿಸಲಿದ್ದಾರೆ.
ಮಾಜಿ ದೇವದಾಸಿ ಮಹಿಳೆಯರು ಹಾಗೂ ಅವರ ಮಕ್ಕಳು ಸಮೀಕ್ಷೆಯಲ್ಲಿ ಪಾಲ್ಗೊಂಡು ನಿಖರ ಮಾಹಿತಿ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಕಲ್ಯಾಣ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿ ಅಥವಾ ಟೋಲ್ ಫ್ರೀ ಸಂಖ್ಯೆ 1800-599-2025 ಕ್ಕೆ ಕರೆ ಮಾಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕೋರಿದ್ದಾರೆ.
ಇದೇ ವೇಳೆ ಲಿಂಗತ್ವ(Survey) ಅಲ್ಪಸಂಖ್ಯಾತರ ಸಮೀಕ್ಷೆ ನಡೆಸುವ ಗಣತಿದಾರರಿಗೆ ಟ್ಯಾಬ್‍ಗಳನ್ನು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ವಿತರಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ವಿಜಯ್‍ಕುಮಾರ್, ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಸಮರ ಸಾರಥಿ ಸಂಸ್ಥೆಯ ಅಧ್ಯಕ್ಷೆ ಚಂದ್ರಮ್ಮ, ವಾಹಿನಿ ಸಮುದಾಯ ಸಂಸ್ಥೆಯ ಉಪಾಧ್ಯಕ್ಷ ಪುಟ್ಟರಾಜು, ಆರುಂಧತಿ, ಈರಣ್ಣ, ಅವಂತಿಕಾ, ಅಮೂಲ್ಯ, ಮಂಜು, ಬಾಷಾಸಾಬ್, ಪಲ್ಲವಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
