Chitradurga news|nammajana.com|8-8-2024
ನಮ್ಮಜನ.ಕಾಂ, ಚಿತ್ರದುರ್ಗ: ತಾಲ್ಲೂಕಿನ ಅನ್ನೇಹಾಳ್, ಜಂಪಯ್ಯನಹಟ್ಟಿಯ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ಊಟ ಸೇವಿಸಿ ಅಸ್ವಸ್ಥಗೊಂಡ ಘಟನೆಗೆ (Suspended) ಸಂಬಂಧಿಸಿದಂತೆ ವಿದ್ಯಾರ್ಥಿನಿಲಯದ ಮೇಲ್ವಿಚಾರಕರಾದ (ಜೂನಿಯರ್ ವಾರ್ಡನ್) ಮರಾಠಿ ಲಕ್ಷ್ಮೀದೇವಿ ಅವರನ್ನು ಅಮಾನತುಗೊಳಿಸಿ ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ಅವರು ಆದೇಶಿಸಿದ್ದಾರೆ.
ಅನ್ನೇಹಾಳ್, ಜಂಪಯ್ಯನಹಟ್ಟಿಯ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ (Suspended) ಕಳೆದ ಜುಲೈ 12 ರಂದು ರಾತ್ರಿ ಊಟ ಸೇವನೆ ಬಳಿಕ ಸುಮಾರು 08 ರಿಂದ 09 ಮಕ್ಕಳಿಗೆ ಎದೆಉರಿ, ಹೊಟ್ಟೆಯಲ್ಲಿ ಉರಿ ಹಾಗೂ ವಾಂತಿ ಆಗಿ ಅಸ್ವಸ್ಥಗೊಂಡಿದ್ದರು.

ಇದನ್ನೂ ಓದಿ: Lok Adalat Chitradurga: ಲೋಕ ಅದಾಲತ್‍ನಲ್ಲಿ 4,973 ಪ್ರಕರಣಗಳು ಇತ್ಯರ್ಥ
ಬಳಿಕ ಇವರಿಗೆ ಸಮೀಪದ ಗೊಡಬನಾಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಂದ ಪ್ರಥಮ ಚಿಕಿತ್ಸೆ ಕೊಡಿಸಿ, (Suspended) ನಂತರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಬಳಿಕ ಮಕ್ಕಳು ಗುಣಮುಖರಾಗಿದ್ದರು. ಆರೋಗ್ಯ ಸುರಕ್ಷತಾ ಅಧಿಕಾರಿಗಳು ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಕ್ಕಳಿಗೆ ಶುದ್ಧ ಕುಡಿಯುವ ನೀರು, ಕಾಯಿಸಿ ಆರಿಸಿದ ನೀರನ್ನು ಕೊಡಬೇಕು, ನಿಲಯದಲ್ಲಿ ಕೆಟ್ಟಿರುವ ವಾಟರ್ ಪ್ಯೂರಿಫೈಯರ್ ದುರಸ್ತಿಪಡಿಸಲು ಸೂಚನೆ ನೀಡಿದ್ದರು, ಘಟನೆ ಬಗ್ಗೆ ನಿಲಯದ ವಾರ್ಡನ್‍ರವರಿಗೆ ಸಮಾಜಾಯಿಷಿ ನೀಡುವಂತೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿತ್ತು.
ನಂತರದಲ್ಲಿ ಪುನಃ ಕಳೆದ ಆಗಸ್ಟ್ 04 ರಂದು ಕೂಡ (Suspended) ವಿದ್ಯಾರ್ಥಿನಿಲಯದ 05 ಮಕ್ಕಳು ರಾತ್ರಿ ಉಟ ಸೇವಿಸಿ ಅಸ್ವಸ್ಥಗೊಂಡಿದ್ದರಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಗುಣಮುಖರಾಗಿರುತ್ತಾರೆ.
ಹಾಸ್ಟೆಲ್‍ನಲ್ಲಿ ಈ ರೀತಿ ಪದೇ ಪದೇ ಮಕ್ಕಳು ಊಟ ಸೇವನೆಯಿಂದ ಅಸ್ವಸ್ಥಗೊಂಡ ಪ್ರಕರಣ ನಡೆದರೂ, ಇಲಾಖಾ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿಲ್ಲ, ನಿಲಯದ ಮೇಲ್ವಿಚಾರಕರುಗಳಿಗೆ ಸೂಚನೆ ನೀಡಿದ್ದರೂ, ಮಕ್ಕಳ (Suspended) ಊಟೋಪಚಾರದ ವ್ಯವಸ್ಥೆಯಲ್ಲಿ ಗಮನಹರಿಸದೆ ಕರ್ತವ್ಯ ನಿರ್ಲಕ್ಷ್ಯ ತೋರಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ನಿಲಯದ ಮೇಲ್ವಿಚಾರಕರಾದ ಮರಾಠಿ ಲಕ್ಷ್ಮೀದೇವಿ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ವರದಿ ಸಲ್ಲಿಸಿದ್ದರು.
ಇದನ್ನೂ ಓದಿ: Stenographer: ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ
ಸಮಾಜ ಕಲ್ಯಾಣ ಇಲಾಖೆಯ ಜಂಟಿನಿರ್ದೇಶಕರ ವರದಿಯನ್ವಯ ಜಂಪಯ್ಯನಹಟ್ಟಿ ಹಾಸ್ಟೆಲ್‍ನ (Suspended) ಮೇಲ್ವಿಚಾರಕರಾದ ಮರಾಠಿ ಲಕ್ಷ್ಮೀದೇವಿ ಅವರ ವಿರುದ್ಧದ ಇಲಾಖಾ ವಿಚಾರಣೆ, ಶಿಸ್ತು ಕ್ರಮವನ್ನು ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252