Chitradurga news | nammajana.com | 23-8-2024
ನಮ್ಮಜನ.ಕಾಂ, ಚಿತ್ರದುರ್ಗ: ಕರ್ತವ್ಯ ಲೋಪದ ಆರೋಪದಡಿಯಲ್ಲಿ ಅಕ್ಷರ ದಾಸೋಹ ಕಾರ್ಯಕ್ರಮದ ಪ್ರಥಮ ದರ್ಜೆ ಸಹಾಯಕಿ ಆಯೇಷಾ ಸಿದ್ದಿಖಾ ಅವರನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Suspended) ಎಸ್.ಜೆ.ಸೋಮಶೇಖರ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಅಕ್ಷರ ದಾಸೋಹ ಕಾರ್ಯಕ್ರಮ ಅನುಷ್ಠಾನ ಸಂಬಂಧ ಇಲಾಖೆ ಉಪಯೋಗಕ್ಕೆ ಬಾಡಿಗೆ ಆಧಾರದಲ್ಲಿ ಖಾಸಗಿ ಸಂಸ್ಥೆಯಿಂದ ವಾಹನ ಸೇವೆ ಪಡೆಯಲು ದ್ವಿ-ಲಕೋಟೆಯಲ್ಲಿ ಟೆಂಡರ್ (Suspended) ಕರೆಯಲಾಗಿತ್ತು. ಟೆಂಡರ್ ಪ್ರಕ್ರಿಯೆ ವೇಳೆ ಆಯೇಷಾ ಸಿದ್ದಿಖಾ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಅಧಿನಿಯಮ (ಕೆಟಿಪಿಪಿ) ಉಲ್ಲಂಘಿಸಿದ್ದಾರೆ.
ಇದನ್ನೂ ಓದಿ: ವಾಣಿ ವಿಲಾಸ ಸಾಗರದ ನೀರಿನ ಮಟ್ಟ ಭರ್ಜರಿ ಹೆಚ್ಚಳ | Vani Vilasa Sagara Dam
ಈ ಬಗ್ಗೆ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ನೋಟೀಸ್ ಜಾರಿ ಮಾಡಿದ್ದರು. ಆದರೆ ನೋಟೀಸ್ಗೆ ನೀಡಿದ ಉತ್ತರ (Suspended) ಸ್ಪಷ್ಟವಾಗಿರದ ಕಾರಣ ಶುಕ್ರವಾರ ಸೇವೆಯಿಂದ ಅಮಾನತು ಮಾಡಿ ಆದೇಶಿಸಿದ್ದಾರೆ.