Chitradurga news|nammajana.com|2-12-2024
ನಮ್ಮಜನ.ಕಾಂ, ಚಳ್ಳಕೆರೆ: ಸರ್ಕಾರದ ಕೆಲಸ ದೇವರ ಕೆಲಸವೆಂ” ಘೋಷವಾಕ್ಯವನ್ನು ನಾವೆಲ್ಲರೂ ಪ್ರತಿನಿತ್ಯ ನೆನಪಿಸಿಕೊಳ್ಳಬೇಕು. ಸರ್ಕಾರದ ಸೇವಕರು ಜನಸೇವಕರಾಗಿ ಕಾರ್ಯನಿರ್ವಹಿಸಿದಲ್ಲಿ ಮಾತ್ರ ನಿಮಗೂ ಹಾಗೂ ಇಲಾಖೆಗೂ ಗೌರವ, ಯಾವುದೇ ಅಧಿಕಾರಿ, ಸಿಬ್ಬಂದಿಯಾಗಲಿ (Taluk In-charge Secretary) ನಿಯಮಬಾಹಿರ ಚಟುವಟಿಕೆಯಲ್ಲಿ ತೊಡಗಿದರೆ, ಅನಗತ್ಯ ಸುಳ್ಳು ಮಾಹಿತಿ ನೀಡಿದವರ ವಿರುದ್ದ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಶಿಫಾರಸ್ಸು ಮಾಡಲು ಹಿಂಜರಿಯುವುದಿಲ್ಲವೆಂಬ ಎಚ್ಚರಿಕೆಯನ್ನು ತಾಲ್ಲೂಕು ಉಸ್ತುವಾರಿ ಅಧಿಕಾರಿ ಹಾಗೂ ಪರಿಶಿಷ್ಟ ವರ್ಗಗಳ ಇಲಾಖೆ ನಿರ್ದೇಶಕ ಟಿ.ಯೋಗೇಶ್ ನೀಡಿದರು.
ಅವರು, ಶನಿವಾರ ತಾಲ್ಲೂಕು ಪಂಚಾಯಿತಿ ಕಾರ್ಯಲಯದಲ್ಲಿ ವಿವಿಧ ಇಲಾಖೆಗಳ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರದ ಯೋಜನೆಗಳ ಅನುಷ್ಠಾನ ಹಾಗೂ ಸಾರ್ವಜನಿಕರೊಂದಿಗೆ ಉತ್ತಮ (Taluk In-charge Secretary) ಸಂಪರ್ಕವನ್ನಿಟ್ಟುಕೊಂಡು ಕೆಲಸ ನಿರ್ವಹಿಸಿ, ಸುಳ್ಳು ಹೇಳುವುದು ಕೆಲಸದಲ್ಲಿ ನಿರ್ಲಕ್ಷ್ಯ ತೋರುವುದು ಒಳ್ಳೆಯ ಲಕ್ಷಣವಲ್ಲವೆಂದರು.

ಇಲಾಖೆಯ ಪ್ರತಿಯೊಬ್ಬ ಅಧಿಕಾರಿ ಹಾಗೂ ಸಿಬ್ಬಂದಿ ಕಾರ್ಯದಕ್ಷತೆಯ ಬಗ್ಗೆ ನಿರಂತರ ಪರಿಶೀಲನೆ ನಡೆಸಲಾಗುತ್ತದೆ. ಲೋಪಕಂಡುಬಂದಲ್ಲಿ ಮಾತ್ರ ಅಂತಹವರ ವಿರುದ್ದ (Taluk In-charge Secretary) ನಿದ್ರಾಕ್ಷಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಸರ್ಕಾರ ಎಲ್ಲಾ ರೀತಿಯ ಸೌಲಭ್ಯ ನೀಡಿದರೂ ಕೆಲ ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ಕಾಲಹರಣ ಮಾಡುವ ಬಗ್ಗೆ ಮಾಹಿತಿ ಬಂದಿದೆ. ಮುಂದಿನ ದಿನಗಳಲ್ಲಿ ಕಡ್ಡಾಯವಾಗಿ ಅಧಿಕಾರಿಗಳು ಬದಲಾಯಿಸಿಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದರು. ಚಳ್ಳಕೆರೆ ತಾಲ್ಲೂಕು ಶೇಂಗಾ ಬೆಳೆಗೆ ಹೆಸರು ಮಾಡಿದ್ದು, ಕೃಷಿ ಅಧಿಕಾರಿಗಳು ಈ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಬೇಕಲ್ಲದೆ, ಶೇಂಗಾದಿಂದ ತಯಾರಾಗುವ ಉತ್ಪನ್ನಗಳ ಬಗ್ಗೆ ತಿಳಿಸಬೇಕು ಎಂದರು. ತೋಟಗಾರಿಕೆ ಅಧಿಕಾರಿಗೆ ಕಡಿಮೆ ನೀರು ಉಪಯೋಗಿಸಿ ಹೆಚ್ಚು ಉಪಯುಕ್ತ ಬೆಳೆಗಳ ಬಗ್ಗೆ ರೈತರಿಗೆ ಮಾಹಿತಿ ನೀಡಿ ಎಂದರು.
ಇದನ್ನೂ ಓದಿ: ಇಂದು ವಿದ್ಯುತ್ ವ್ಯತ್ಯಯ | ಯಾವ್ಯಾವ ಊರಲ್ಲಿ ಕರೆಂಟ್ ಇಲ್ಲ | Today Power Cut
ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ ದಯಾನಂದಗೆ ಶಾಲಾ, ಕಾಲೇಜು ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಜಲಜೀವನ್‌ಮೀಷನ್ ಯೋಜನೆಯಡಿ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವಂತೆ ಸೂಚಿಸಿದರು. ಪೌರಾಯುಕ್ತ ಜಗರೆಡ್ಡಿಗೆ ನಗರಸಭೆಯ ಅನುದಾನವನ್ನು ಕಾಮಗಾರಿಗೆ ಹೆಚ್ಚು ಉಪಯೋಗಿಸದೆ ವಿದ್ಯಾರ್ಥಿಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ (Taluk In-charge Secretary) ಉಪಯೋಗವಾಗುವಂತೆ ಬಳಕೆ ಮಾಡಿ ಎಂದರು. ಬಿಇಒ ಕೆ.ಎಸ್.ಸುರೇಶ್‌ಗೆ ಸೂಚಿಸಿದ ಅವರು, ಎಸ್‌ಎಸ್‌ಎಲ್‌ಸಿಯಲ್ಲಿ ಶೇ.೧೦೦ರ ಫಲಿತಾಂಶ ದಾಖಲಿಸಲು ತಾಲ್ಲೂಕು ಮಟ್ಟದ ಶಿಕ್ಷಣ ಇಲಾಖೆಯ ಹಿರಿಯ ಶಿಕ್ಷಕರನ್ನು ನೋಡಲ್ ಅಧಿಕಾರಿಯಾಗಿ ಸೂಚಿಸುವಂತೆ ತಿಳಿಸಿದರು.
ಇದನ್ನೂ ಓದಿ: ಬೀದಿ ನಾಯಿಗಳ ದಾಳಿ | ಆರು ಮಕ್ಕಳಿಗೆ ಗಾಯ | Stray dog attack
ತಹಶೀಲ್ದಾರ್ ರೇಹಾನ್‌ಪಾಷ, ಜಿಲ್ಲಾ ಪರಿಶಿಷ್ಟ ವರ್ಗಗಳ ಅಧಿಕಾರಿ ದಿವಾಕರ್, ಸಹಾಯಕ ನಿರ್ದೇಶಕ ಸಂಪತ್ತು, ಸಂತೋಷ್ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252