Chitradurga news|nammajana.com|24-2-2025
ನಮ್ಮಜನ.ಕಾಂ, ಚಿತ್ರದುರ್ಗ: ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ, ಪ್ರಗತಿ ಸಾಧಿಸುವಲ್ಲಿ ನಿರ್ಲಕ್ಷ್ಯ (Tax collection) ತೋರಿದ ಮೂವರು ಗ್ರಾಮ ಪಂಚಾಯತಿಗಳ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಒಂದು ವಾರ್ಷಿಕ ವೇತನ ಬಡ್ತಿಯನ್ನು ಸಂಚಿತ ಪರಿಣಾಮ ಸಹಿತವಾಗಿ ತಡೆಹಿಡಿಯುವ ದಂಡನೆ ವಿಧಿಸಿ ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ಆದೇಶ ಹೊರಡಿಸಿದ್ದಾರೆ.
ಮೊದಲೇ ಸೂಚನೆ ನೀಡಿದ್ದ ಸಿಇಒ
ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಕರ ವಸೂಲಾತಿ ಕುರಿತಂತೆ ಆಂದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿಯಲ್ಲಿ ಪ್ರಗತಿ ಸಾಧಿಸುವಂತೆ ಜಿಲ್ಲಾ ಪಂಚಾಯತಿ ವತಿಯಿಂದ ಈ ಹಿಂದೆಯೇ ಸೂಚನೆ ನೀಡಲಾಗಿತ್ತು. ಅಲ್ಲದೆ ಹಲವು ಸಭೆಗಳನ್ನು ಕೈಗೊಂಡು, ಪತ್ರಗಳ ಮೂಲಕ ಹಾಗೂ ವಿಡಿಯೋ ಸಂವಾದ ಮೂಲಕ ತಿಳಿಸಲಾಗಿತ್ತು. ಆದರೆ (Tax collection) ಮೂವರು ಗ್ರಾ.ಪಂ. ಪಿಡಿಒ ಗಳು ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆಂದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿಯಲ್ಲಿ ಪ್ರಗತಿ ಸಾಧಿಸಿರಲಿಲ್ಲ.

ಮೂವರು ಪಿಡಿಓಗಳ ವಿವರ
ಚಳ್ಳಕೆರೆ ತಾಲ್ಲೂಕು ದೇವರೆಡ್ಡಿಹಳ್ಳಿ ಗ್ರಾ.ಪಂ. ಪಿಡಿಒ ವೇದವ್ಯಾಸಲು ಅವರು ಕರ ವಸೂಲಾತಿಯಲ್ಲಿ ಶೇ. 27.88 ರಷ್ಟು, ಹಿರೇಹಳ್ಳಿ ಗ್ರಾ.ಪಂ. ಪಿಡಿಒ ನರಸಿಂಹಪ್ಪ- ಶೇ. 37.77 ಹಾಗೂ ಹೊಸದುರ್ಗ ತಾಲ್ಲೂಕು ಗುಡ್ಡದ ನೇರಲೆಕೆರೆ ಗ್ರಾ.ಪಂ. ಪಿಡಿಒ ಕುಮಾರ್ ಸಿಂಗ್ ಬಿ.ಎಲ್. ಅವರು ಕೇವಲ ಶೇ. 36.68 ರಷ್ಟು ಮಾತ್ರ ತೆರಿಗೆ ವಸೂಲಾತಿ ಮಾಡಿದ್ದು, ಕತವ್ಯದಲ್ಲಿ ನಿರ್ಲಕ್ಷ್ಯ ತೋರಿ, ಜಿಲ್ಲೆಯ ಪ್ರಗತಿ ಕುಂಠಿತಗೊಳ್ಳಲು ಕಾರಣರಾಗಿದ್ದನ್ನು ಪರಿಗಣಿಸಿ, ಕಾರಣ ಕೇಳಿ ಪಿಡಿಒ ಗಳಿಗೆ ನೋಟಿಸ್ (Tax collection) ನೀಡಲಾಗಿತ್ತು,
ಇದನ್ನೂ ಓದಿ: ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮವಾದ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ | Laser surgical machine
ಈ ನೋಟಿಸ್‍ಗೆ ಸೂಕ್ತ ಸಮಜಾಯಿಷಿ ಸಲ್ಲಿಸಿರುವುದಿಲ್ಲ. ಹೀಗಾಗಿ ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ವಹಿಸಿ, ಪ್ರಗತಿಗೆ ಕುಂಠಿತರಾಗಲು ಕಾರಣರಾದ ಈ ಮೂವರು ಪಿಡಿಒ ಗಳಿಗೆ ಒಂದು ವಾರ್ಷಿಕ ವೇತನ ಬಡ್ತಿಯನ್ನು ಸಂಚಿತ ಪರಿಣಾಮ (Tax collection) ಸಹಿತವಾಗಿ ತಡೆಹಿಡಿಯುವ ದಂಡನೆ ವಿಧಿಸಿ ಆದೇಶಿಸಲಾಗಿದೆ ಎಂದು ಜಿ.ಪಂ. ಸಿಇಒ ಸೋಮಶೇಖರ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: Robbery | ಅಧಿಕಾರಿಗಳು ಎಂದು ಬೆದರಿಸಿ ಚಿನ್ನಾಭರಣ ದರೋಡೆ ಮಾಡಿದ ಕಳ್ಳರು
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252