Chitradurga news | nammajana.com|11-07-2025
ನಮ್ಮಜನ.ಕಾಂ, ಚಿತ್ರದುರ್ಗ: ವಾಣಿಜ್ಯ ಉದ್ದಿಮೆ ಪರವಾನಿಗೆ ಪಡೆದು ತಂಬಾಕು(tobacco) ಉತ್ಪನ್ನಗಳನ್ನು ಮಾರಾಟ ಮಾಡುವ ಎಲ್ಲಾ ಅಂಗಡಿಗಳು ಪ್ರತ್ಯೇಕವಾಗಿ ತಂಬಾಕು ಮಾರಾಟ ಪರವಾನಿಗೆಯನ್ನು ಪಡೆದುಕೊಳ್ಳಬೇಕು. ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ಮಾಡುವ ಶೇ.90 ರಷ್ಟು ಅಂಗಡಿಗಳಿಗೆ ತಿಂಗಳ ಒಳಗಾಗಿ ಪ್ರತ್ಯೇಕ ಪರವಾನಿಗೆ ನೀಡುವ ಗುರಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್(DC T.Venkatesh) ತಾಕೀತು ಮಾಡಿದರು.
ಇದನ್ನೂ ಓದಿ: ಚಿತ್ರದುರ್ಗಕ್ಕೆ ಮೌಲಾನಾ ಶಾಲೆ ಮಂಜೂರು

ಶಾಲಾ ಕಾಲೇಜು, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಹಾಗೂ ವ್ಯಾಪಾರ ಮಳಿಗೆಗಳಲ್ಲಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್‍ಗಳಲ್ಲಿ ತಂಬಾಕು ಸೇವನೆ ನಿಷೇಧ ಹಾಗೂ ಕೋಟ್ಪಾ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿರುವ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಧೃಡೀಕರಣ ಪಡೆಯುವಂತೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ನಿಯಮ ಮೀರಿ ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುವುದು ಕಂಡುಬಂದರೆ, ಅಂತಹ ವ್ಯಾಪಾರಿಗಳ ಬಾಡಿಗೆ(tobacco) ಒಡಂಬಡಿಕೆಯನ್ನು ರದ್ದು ಪಡಿಸುವಂತೆ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಬಾರ್ ಅಂಡ್ ರೆಸ್ಟೋರೆಂಟ್‍ಗಳಲ್ಲಿ ಎಲ್ಲೆಂದರಲ್ಲಿ ತಂಬಾಕು ಸೇವನೆ, ಧೂಮಪಾನ ಮಾಡುತ್ತಾರೆ. ಇದು ಪ್ಯಾಸಿವ್ ತಂಬಾಕು ಸೇವನೆಗೆ ಕಾರಣವಾಗುತ್ತಿದೆ, ಇದನ್ನು ನಿಯಂತ್ರಿಸುವಂತೆ ಅಬಕಾರಿ ಉಪ ಆಯುಕ್ತರಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಇದನ್ನೂ ಓದಿ: ಪಾವಗಡ ರಸ್ತೆ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಅಸ್ತು
ಬಾರ್ ಅಂಡ್ ರೆಸ್ಟೋರೆಂಟ್‍ಗಳಲ್ಲಿ ಟೇಬಲ್‍ಗಳಿಗೆ ಸಿಗರೇಟ್ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು ಒದಗಿಸುವುದಕ್ಕೆ ನಿಷೇಧವಿದೆ. ಪ್ರತಿ ಬಾರ್ ಅಂಡ್ ರೆಸ್ಟೋರೆಂಟ್‍ಗಳಲ್ಲಿ ಪ್ರತ್ಯೇಕ ತಂಬಾಕು ಸೇವನಾ, ಧೂಮಪಾನ ವಲಯಗಳನ್ನು ನಿರ್ಮಿಸಬೇಕು. ಈ ನಿಯಮ ಪಾಲನೆ ನಂತರವೇ ಅಬಕಾರಿ ಇಲಾಖೆಯಿಂದ ಪರವಾನಿಗೆ ನೀಡಲಾಗುವುದು ಎಂದು ಅಬಕಾರಿ ಉಪ ಆಯುಕ್ತೆ ಆಶಾಲತಾ.ಕೆ ಸಭೆಗೆ ಮಾಹಿತಿ ನೀಡಿದರು.
ಅಧಿಕಾರಿಗಳು ಬಾರ್ ಅಂಡ್ ರೆಸ್ಟೋರೆಂಟ್‍ಗಳಲ್ಲಿ ಈ ನಿಯಮ ಪಾಲನೆ (tobacco) ಆಗುತ್ತಿದೆಯೇ ಇಲ್ಲವೆ ಎಂಬುದರ ಬಗ್ಗೆ ಕಾಲಕಾಲಕ್ಕೆ ಪರಿಶೀಲಿಸಬೇಕು, ಉಲ್ಲಂಘನೆ ಕಂಡುಬಂದಲ್ಲಿ ಲೈಸೆನ್ಸ್ ರದ್ದತಿಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಜಿಲ್ಲೆಯ ಎಲ್ಲ ಶಾಲಾ, ಕಾಲೇಜು ಶಿಕ್ಷಣ ಸಂಸ್ಥೆಗಳನ್ನು ತಂಬಾಕು ಮುಕ್ತ ವಲಯಗಳನ್ನಾಗಿ ಮಾಡಬೇಕು, ಪ್ರತಿಯೊಂದು ಶಾಲಾ ಕಾಲೇಜು ವ್ಯಾಪ್ತಿಯಲ್ಲಿ ಈ ಬಗ್ಗೆ ಬೋರ್ಡ್ ಹಾಕಿಸಬೇಕು, ಅಲ್ಲದೆ ಶಾಲಾ ಕಾಲೇಜು ವ್ಯಾಪ್ತಿಯಲ್ಲಿನ ಅಂಗಡಿಗಳಲ್ಲಿ ಯಾವುದೇ ಕಾರಣಕ್ಕೂ ತಂಬಾಕು ಉತ್ಪನ್ನಗಳು ಮಾರಾಟ ಆಗದಂತೆ ಅಧಿಕಾರಿಗಳು ಆಗಿಂದಾಗ್ಗೆ ತಪಾಸಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಇದನ್ನೂ ಓದಿ: ನರೇಗಾ | ವೈಯಕ್ತಿಕ ಕಾಮಗಾರಿಗೆ ಆದ್ಯತೆ ನೀಡಲು ಸೂಚನೆ
ಸಭೆಯಲ್ಲಿ ನಾಯಿ ಕಡಿತ ಹಾಗೂ ರೇಬಿಸ್ ರೋಗದ ನಿಯಂತ್ರಣ ಕುರಿತಂತೆ(tobacco) ಸಾರ್ವಜನಿಕರಿಗೆ ಮಾಹಿತಿ ನೀಡುವ ಕರಪತ್ರಗಳನ್ನು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಬಿಡುಗಡೆ ಮಾಡಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ಪೊಲೀಸ್ ಉಪಾಧೀಕ್ಷಕ ಉಮೇಶ್ ಈಶ್ವರ ನಾಯ್ಕ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕ ಮಂಜುನಾಥ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ. ರವೀಂದ್ರ, ತಂಬಾಕು ನಿಯಂತ್ರಣ ಕೋಶ ವಿಭಾಗೀಯ ಸಂಯೋಜಕ ಮಹಾಂತೇಶ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252