Chitradurga news|Nammajana.com|2-8-2025
ನಮ್ಮಜನ.ಕಾಂ, ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿಗಳಲ್ಲಿ (Toll collection) ಸಂಚರಿಸುವ ವಾಹನಗಳಿಗೆ ಒಪ್ಪಂದದ ಅನುಸಾರ ಟೋಲ್ ಅನ್ನು ಸಂಗ್ರಹಿಸಲಾಗುತ್ತಿದೆ ಆದರೆ ರಸ್ತೆಗಳು ಹಾಳಾಗಿವೆ ಎಂದು ಡಿಸಿ ವೆಂಕಟೇಶ್ ಅವರು ಸಮಾಧಾನ ಹೊರಹಾಕಿದರು.

ಹೈವೇ ಯಲ್ಲಿ ಕೆಲವೆಡೆ ರಸ್ತೆಗಳು ಬಹಳಷ್ಟು ಹಾಳಾಗಿದ್ದು, ಅದನ್ನು ಸಮರ್ಪಕವಾಗಿ ನಿರ್ವಹಣೆ ಮಾಡುತ್ತಿಲ್ಲ, ರಸ್ತೆ ಕಾಮಗಾರಿಗಳಿಗಾಗಿ ಮಾರ್ಗ ಬದಲಾಯಿಸಿ, ಸಂಚಾರ ದಟ್ಟಣೆ ಹಾಗೂ ಅಪಘಾತಗಳು ಕೂಡ ಸಂಭವಿಸುತ್ತಿವೆ. ಟೋಲ್ ಸಂಗ್ರಹಣೆ ಕೇಂದ್ರಗಳ ಪೈಕಿ ಅರ್ಧದಷ್ಟು ಕೇಂದ್ರಗಳನ್ನು ಬಂದ್ ಮಾಡಿ ಕೇವಲ ಒಂದೆರಡು ಕೇಂದ್ರಗಳನ್ನು ಮಾತ್ರ (Toll collection) ತೆರೆಯುವುದರಿಂದ, ವಾಹನ ದಟ್ಟಣೆ ಉಂಟಾಗುತ್ತಿದೆ.
ವಿಐಪಿ, ಆ್ಯಂಬುಲೆನ್ಸ್ ವಾಹನಗಳು ಸಂಚರಿಸುವ ಮಾರ್ಗದಲ್ಲಿ ಲಾರಿ, ಟ್ರಕ್‍ಗಳು ಕೂಡ ಪ್ರವೇಶ ಮಾಡುತ್ತಿವೆ. ಇದರಿಂದಾಗಿ ವಿಐಪಿ, ಆಂಬುಲೆನ್ಸ್‍ಗಳು ಟೋಲ್ ಮಾರ್ಗ ಪ್ರವೇಶಿಸಲು ಕಾಯುವಂತಹ ಸ್ಥಿತಿ ಇರುತ್ತದೆ. ರಸ್ತೆಗಳು ಸಮರ್ಪಕವಾಗಿ ಇಲ್ಲದೇ ಇರುವ ಸಂದರ್ಭಗಳಲ್ಲಿ ಟೋಲ್ ಸಂಗ್ರಹ (Toll collection) ಮಾಡಬಾರದು ಎಂಬುದಾಗಿ ಇತ್ತೀಚೆಗೆ ನ್ಯಾಯಾಲಯ ತೀರ್ಪು ನೀಡಿದೆ.
ಇದನ್ನೂ ಓದಿ: Gold Rate | ಚಿನ್ನದ ಬೆಲೆಯಲ್ಲಿ ಏರಿಕೆ
ಹೀಗಿದ್ದಾಗ, ರಸ್ತೆ ಸರಿ ಇಲ್ಲದ ಕಡೆಗಳಲ್ಲಿ ಟೋಲ್ ಏಕೆ ಸಂಗ್ರಹಿಸುತ್ತೀರಿ ಎಂದು ಜಿಲ್ಲಾಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದರು.
