Chitradurga news|nammajana.com|18-12-2024
ನಮ್ಮಜನ.ಕಾಂ, ಚಿತ್ರದುರ್ಗ: ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ (Tourism) ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಆಯೋಜಿಸಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಡಿ.28 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಪ್ರವಾಸೋದ್ಯಮ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಪ್ರವಾಸೋದ್ಯಮ/ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದ್ದು, ಪರಿಶಿಷ್ಟ ಜಾತಿಯ 292 ಹಾಗೂ ಪರಿಶಿಷ್ಟ ಪಂಗಡದ 162 ಅಭ್ಯಥಿಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ (Tourism) ಮೈಸೂರಿನ ಫುಡ್ ಕ್ರಾಫ್ಟ್ ಇನ್ಸ್ಟಿಟ್ಯೂಟ್ ಹಾಗೂ ಬೆಂಗಳೂರಿನ ಇನ್ಸ್‍ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್ ಅವರ ಮೂಲಕ ವಸತಿ ಸಹಿತ ತರಬೇತಿ ಕಾರ್ಯಕ್ರಮ ಜಾರಿಗೊಳಿಸಲು ಉದ್ದೇಶಿಸಲಾಗಿದೆ.

ಫುಡ್ ಅಂಡ್ ಬೇವರೇಜ್ ಸರ್ವಿಸ್ ಸ್ಟೇವಾರ್ಡ್, ರೂಂ ಅಟೆಂಡೆಂಟ್, ಫ್ರಂಟ್ ಆಫೀಸ್ ಅಸೋಸಿಯೇಟ್ ವಿಭಾಗದಲ್ಲಿ ನಾಲ್ಕು ತಿಂಗಳ ತರಬೇತಿ ಹಾಗೂ ಮಲ್ಟಿ ಕ್ಯೂಸಿನ್ ಕುಕ್ (Tourism) ವಿಭಾಗದಲ್ಲಿ 5 ತಿಂಗಳ ತರಬೇತಿಗೆ ಪಡೆಯಲು ಇಚ್ಚಿಸುವ ಅರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಜಿಲ್ಲಾ ಉಸ್ತುವಾರಿ ಸಚಿವರ ತವರಲ್ಲಿ ವಿದ್ಯಾರ್ಥಿಗಳಿಗೆ ಬಸ್ ಪ್ರಾಬ್ಲಂ | Bus problem
ಇದೇ ಡಿ.18 ರಿಂದ ನಗರದ ಕೋಟೆ ಮುಂಭಾಗದ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ (Tourism) ಕಚೇರಿಯಲ್ಲಿ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ದ್ವಿ-ಪ್ರತಿಯಲ್ಲಿ ಡಿ.28ರ ಸಂಜೆ 5.30ರೊಳಗೆ ಕಚೇರಿಗೆ ಸಲ್ಲಿಸಲು ಸೂಚಿಸಿದೆ.
ಇದನ್ನೂ ಓದಿ: ವಾಣಿ ವಿಲಾಸ ಸಾಗರ ಭರ್ತಿಗೆ ಒಂದು ಅಡಿ ಮಾತ್ರ ಬಾಕಿ | ,ಎಷ್ಟಿದೆ ಇಂದಿನ ನೀರಿನ ಮಟ್ಟ | Vani Vilasa Sagara Dam
ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆ ಕಚೇರಿಯ (Tourism) ದೂರವಾಣಿ ಸಂಖ್ಯೆ 08194-234466 ಗೆ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರಾದ ಬಿ.ಕಾವ್ಯ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252