Chitradurga News | Nammajana.com |28-09-2025
ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಕರ್ನಾಟಕ ರಾಜ್ಯ (Training) ಮುಕ್ತ ವಿಶ್ವವಿದ್ಯಾಲಯ ವತಿಯಿಂದ ಪದವಿಯನ್ನು ಪೂರೈಸಿದ ಅಭ್ಯರ್ಥಿಗಳಿಗೆ ಕೆ.ಎಸ್.ಒ.ಯು ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಬ್ಯಾಂಕಿಂಗ್ ಹಾಗೂ ಕೇಂದ್ರ ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ 50 ದಿನಗಳ ವಿಶೇಷ ತರಬೇತಿ ಕಾರ್ಯಕ್ರಮ ಆಯೋಜಿಸಿದೆ.

ಇದನ್ನೂ ಓದಿ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಗೈರಾಗುವ ಗಣತಿದಾರರ ಮೇಲೆ ಕಠಿಣ ಕ್ರಮ | DC ವೆಂಕಟೇಶ್ ಎಚ್ಚರಿಕೆ
ಅಭ್ಯರ್ಥಿಗಳಿಗೆ ಈ 50 ದಿನಗಳ ಸ್ಪರ್ಧಾತ್ಮಕ ತರಬೇತಿಯಲ್ಲಿ ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸಲು ಅಗತ್ಯವಾದ ಜ್ಞಾನ ಹಾಗೂ ಕೌಶಲ್ಯವನ್ನು ಒದಗಿಸುತ್ತದೆ. ಯಾವುದೇ ಪದವಿ ಪೂರ್ಣಗೊಳಿಸಿದ ಆಸಕ್ತ ಅಭ್ಯರ್ಥಿಗಳು ತರಬೇತಿಯನ್ನು ಪಡೆಯಲು ನೋಂದಣಿ ಮಾಡಿಕೊಳ್ಳಬೇಕು.
ನೋಂದಾವಣೆಯನ್ನು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಕಛೇರಿ ಸಮಯದಲ್ಲಿ ನೋಂದಾಯಿಸಲು ಸೆ. 30 ಕೊನೆಯ ದಿನವಾಗಿರುತ್ತದೆ.
ಇದನ್ನೂ ಓದಿ: Power cut: ಚಿತ್ರದುರ್ಗ ನಗರದಲ್ಲಿ ಸೆಪ್ಟೆಂಬರ್ 29 ರಂದು ಕರೆಂಟ್ ಇರಲ್ಲ….
ಹೆಚ್ಚಿನ ಮಾಹಿತಿಗಾಗಿ(Training) ದೂರವಾಣಿ ಸಂಖ್ಯೆ 08212515944 ಅಥವಾ 9964760090 ಗೆ ಕರೆ ಮಾಡಿ ಸಮಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕುಲಸಚಿವ ನವೀನ್‍ಕುಮಾರ್ ಎಸ್.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
