Chitradurga news| nammajana.com |12-6-2024 ನ
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಜೂನ್ 15ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆರವರೆಗೆ ಮಿನಿ ಉದ್ಯೋಗ ಮೇಳ (Udyoga mela) ಹಮ್ಮಿಕೊಳ್ಳಲಾಗಿದೆ.
ಉದ್ಯೋಗ ಮೇಳದಲ್ಲಿ (Udyoga mela) 8ಕ್ಕೂ ಹೆಚ್ಚಿನ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಪುರುಷ, ಮಹಿಳಾ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಾಗುವುದು.

ಕೆಲಸ ಪಡೆಯಲು ವಿದ್ಯಾರ್ಹತೆ ಮತ್ತು ಅಗತ್ಯ ದಾಖಲೆ: (Udyoga mela)
ಎಸ್‍ಎಸ್‍ಎಲ್‍ಸಿ, ಪಿ.ಯು.ಸಿ, ಡಿಪ್ಲಮೋ, ಐಟಿಐ, ಯಾವುದೇ ವಿಷಯದಲ್ಲಿ ಪದವಿ ಪಡೆದ 18 ರಿಂದ 30 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ತಮ್ಮ 5 ಪ್ರತಿ ಬಯೋಡಾಟಾ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಭಾವಚಿತ್ರ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ
ಹೆಚಿನ ಮಾಹಿತಿಗಾಗಿ ಚಿತ್ರದುರ್ಗ ನಗರದ ಹಳೇ ವೈಶಾಲಿ ಗೇಟ್ ಹತ್ತಿರದ ಸ್ಟೇಡಿಯಂ ತಿರುವುನಲ್ಲಿರುವ ಜಿಲ್ಲಾ ಉದ್ಯೋಗ (Udyoga mela) ವಿನಿಮಯ ಕೇಂದ್ರ ಕಚೇರಿಯ ದೂರವಾಣಿ ಸಂಖ್ಯೆ 7022459064, 8105619020, 9945587060 ಗೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252