Chitradurga news | nammajana.com | 29-07-2025
ನಮ್ಮಜನ.ಕಾಂ,ಚಿತ್ರದುರ್ಗ: ರಾಜ್ಯದಲ್ಲಿ(BJP) ರೈತರಿಗೆ ಯೂರಿಯಾ ಗೊಬ್ಬರ ಕೊರತೆಯುಂಟಾಗಿರುವುದನ್ನು ವಿರೋಧಿಸಿ ಬಿಜೆಪಿ ರೈತ ಮೋರ್ಚಾದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಇದನ್ನೂ ಓದಿ: ವಿ.ವಿ.ಸಾಗರ ಜಲಾಶಯಕ್ಕೆ ಹರಿದು ಬರುತ್ತಿರುವ ಭದ್ರೆ

ನೀಲಕಂಠೇಶ್ವರಸ್ವಾಮಿ ದೇವಸ್ಥಾನದಿಂದ ಎತ್ತಿನಬಂಡಿ ಹಾಗೂ ಕತ್ತೆಗಳ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ವಿರುದ್ದ ಧಿಕ್ಕಾರಗಳನ್ನು ಕೂಗಿ ವಿನೂತನವಾಗಿ ಪ್ರತಿಭಟಿಸಿದರು.
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ನವೀನ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತ, ಪ್ರತಿಯೊಂದಕ್ಕೂ ಕೇಂದ್ರದ ಕಡೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈ ತೋರಿಸುತ್ತಿರುವುದರಿಂದ ದೇಶಕ್ಕೆ ಅನ್ನ ನೀಡುವ ರೈತ ಮಣ್ಣು ತಿನ್ನುವ ಪರಿಸ್ಥಿತಿಗೆ ತಲುಪಿದ್ದಾನೆ. ಸಣ್ಣ ಹಿಡುವಳಿದಾರಿಗೆ ಗೊಬ್ಬರ ಕೊಡಬೇಕೆಂಬ ಸಾಮಾನ್ಯ ಜ್ಞಾನವೂ ರಾಜ್ಯ ಸರ್ಕಾರಕ್ಕೆ ಇದ್ದಂತಿಲ್ಲ.
ಶಿವಾನಂದ ಪಾಟೀಲ್, ಕೃಷಿ ಸಚಿವ(BJP) ಚೆಲುವರಾಯಸ್ವಾಮಿ, ಗೃಹ ಸಚಿವ ಡಾ.ಜಿ.ಪರಮೇಶ್ವರ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಇವರುಗಳು ಒಂದೊಂದು ವಿಭಿನ್ನ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕೇಂದ್ರ ಸರ್ಕಾರ ರೈತರಿಗೆ ಅಗತ್ಯವಿರುವಷ್ಟು ಗೊಬ್ಬರ ಪೂರೈಕೆ ಮಾಡುತ್ತಿರುವುದನ್ನು ಕಾಳ ಸಂತೆಕೋರರಿಗೆ ಮಾರಾಟ ಮಾಡುತ್ತಿರುವ ರಾಜ್ಯ ಸರ್ಕಾರದ ಬೇಜವಾಬ್ದಾರಿತನದಿಂದ ಗೊಬ್ಬರಕ್ಕೆ ಅಭಾವ ಸೃಷ್ಟಿಯಾಗಿದೆ ಎಂದು ಕಿಡಿ ಕಾರಿದರು.
ಇದನ್ನೂ ಓದಿ: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ
ರೈತರ ಕೃಷಿಗೆ ತೊಂದರೆಯಾಗಬಾರದೆಂದು ಕೇಂದ್ರ ಸರ್ಕಾರ ಮುಚ್ಚಿ ಹೋಗಿರುವ ಗೊಬ್ಬರ ಫ್ಯಾಕ್ಟರಿಗಳನ್ನು ಮತ್ತೆ ಆರಂಭಿಸಿದೆ. ಬಡ ರೈತನಿಗೆ ಅನ್ಯಾಯ ಮಾಡಿದರೆ ಸುಮ್ಮನಿರುವುದಿಲ್ಲ. ಸದನದ ಒಳಗೆ ಮತ್ತು ಹೊರಗೆ ಪ್ರತಿಭಟಿಸುತ್ತೇವೆ. ರಾಜ್ಯ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಕೇಂದ್ರ ಸರ್ಕಾರ ಸಾವಿರಾರು ಕೋಟಿ ರೂ.ಗಳ ಸಬ್ಸಿಡಿ ಕೊಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉಡಾಫೆ ಉತ್ತರ ನೀಡುವುದನ್ನು ನಿಲ್ಲಿಸಬೇಕೆಂದು ಎಚ್ಚರಿಸಿದರು.
ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡಿ, ಕಳೆದ ಹತ್ತು ವರ್ಷಗಳಿಗಿಂತಲೂ ಈ ಬಾರಿ ಅಧಿಕ ಮಳೆಯಾಗಿರುವುದರಿಂದ ಜಿಲ್ಲೆಯಲ್ಲಿ ರೈತರು ಬಿತ್ತನೆಗೆ ತಯಾರಾಗಿದ್ದಾರೆ. ಕೆಲವು ಕಡೆ ಬಿತ್ತನೆಯಾಗಿದೆ. ಯೂರಿಯಾ ಗೊಬ್ಬರಕ್ಕೆ ಕೊರೆಯಾಗಿದ್ದರೂ ಜಿಲ್ಲೆಗೆ ಎಷ್ಟು ಮೆ.ಟನ್ ಗೊಬ್ಬರ ಬೇಕೆಂಬುದರ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಒಮ್ಮೆಯೂ ಜಿಲ್ಲಾಧಿಕಾರಿ ಜೊತೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.
ಮೊಳಕಾಲ್ಮುರು, ಚಳ್ಳಕೆರೆ, ಹಿರಿಯೂರು(BJP) ತಾಲ್ಲೂಕಿನಲ್ಲಿ ಮಳೆ ಕಡಿಮೆಯಾಗಿದೆ. ಹೊಳಲ್ಕೆರೆ, ಹೊಸದುರ್ಗ, ಚಿತ್ರದುರ್ಗ ತಾಲ್ಲೂಕಿನಲ್ಲಿ ಮೆಕ್ಕೆಜೋಳ ಬಿತ್ತನೆಯಾಗಿದೆ. ರೈತರನ್ನು ರಾಜ್ಯ ಸರ್ಕಾರ ಸಂಕಷ್ಟದಲ್ಲಿ ಸಿಲುಕಿಸಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಬೇಜವಾಬ್ದಾರಿಯಿಂದ ರೈತನಿಗೆ ಗೊಬ್ಬರದ ಅಭಾವ ಕಾಡುತ್ತಿದೆ ಎಂದರು.
ಇದನ್ನೂ ಓದಿ: ವಿ ವಿ ಸಾಗರ ನೀರಿನ ಮಟ್ಟದಲ್ಲಿ ಇಳಿಕೆ
ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್ ಯಾದವ್ ಮಾತನಾಡಿ, ಕೇಂದ್ರ ಸರ್ಕಾರ ಎಂಟು ಲಕ್ಷ ಮೆ.ಟನ್ ರಸ ಗೊಬ್ಬರನ್ನು ರಾಜ್ಯಕ್ಕೆ ಪೂರೈಕೆ ಮಾಡಿದೆ. ಇದರಲ್ಲಿ ಎರಡು ಲಕ್ಷ ಐವತ್ತು ಸಾವಿರ ಮೆಟ್ರಿಕ್ ಟನ್ ಗೊಬ್ಬರವನ್ನು ರಾಜ್ಯ ಸರ್ಕಾರ ಕಾಳ ಸಂತೆಯಲ್ಲಿ ಮಾರಾಟ ಮಾಡಿರುವುದರಿಂದ ರೈತ ಗೊಬ್ಬರಕ್ಕೆ ಪರದಾಡುವಂತಾಗಿದೆ. ಅನ್ನದಾತ ರೈತ ಬೆಳಿಗ್ಗೆಯಿಂದ ಗೊಬ್ಬರದಂಗಡಿಗಳ ಮುಂದೆ ಸಾಲುಗಟ್ಟಿ ನಿಲ್ಲುವಂತಾಗಿದೆ. ಮುನ್ನೂರು ರೂ.ಗೆ ಸಿಗಬೇಕಾದ ಗೊಬ್ಬರವನ್ನು ಐದು ನೂರು ರೂ.ಗಳಿಗೆ ಮಾರಾಟ ಮಾಡುತ್ತಿದ್ದಾರೆ. ಮಂತ್ರಿಗಳಿಗೆ, ಅಧಿಕಾರಿಗಳಿಗೆ ರೈತರ ಬಗ್ಗೆ ಕಾಳಜಿಯಿಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಮಾತನಾಡಿ, ರಾಜ್ಯಕ್ಕೆ ಅಗತ್ಯವಿರುವಷ್ಟು ಗೊಬ್ಬರವನ್ನು ಕೇಂದ್ರ ಸರ್ಕಾರ ಪೂರೈಕೆ ಮಾಡಿರುವುದನ್ನು ಕಾಳಸಂತೆಕೋರರಿಗೆ ಮಾರಾಟ ಮಾಡುತ್ತಿರುವುದರಿಂದ ರೈತರು ಯೂರಿಯಾ ಗೊಬ್ಬರಕ್ಕೆ ತೊಂದರೆ ಅನುಭವಿಸುವಂತಾಗಿದೆ.
ಬರ ಪೀಡಿತ ಪ್ರದೇಶ ಚಿತ್ರದುರ್ಗ(BJP) ಜಿಲ್ಲೆಯ ರೈತರು ಮಳೆಯನ್ನೇ ನಂಬಿಕೊಂಡು ಕೃಷಿಯಲ್ಲಿ ತೊಡಗಿದ್ದಾರೆ. ಗೋಹತ್ಯೆ ಜಾಸ್ತಿಯಾಗುತ್ತಿರುವುದರಿಂದ ಜಾನುವಾರುಗಳ ಸಂಖ್ಯೆ ಕ್ಷೀಣಿಸುತ್ತಿದ್ದು, ಕೊಟ್ಟಿಗೆ ಗೊಬ್ಬರವೂ ಸಿಗದಂತಾಗಿದೆ. ಇದರಿಂದ ಅನ್ನದಾತ ರೈತ ತೊಳಲಾಡುತ್ತಿದ್ದಾನೆ. ರಾಜ್ಯ ಸರ್ಕಾರ ನಿರ್ಲಕ್ಷೆ ವಹಿಸದೆ ತಕ್ಷಣದಿಂದಲೇ ರೈತರು ಅನುಭವಿಸುತ್ತಿರುವ ತೊಂದರೆಯನ್ನು ನಿವಾರಿಸಬೇಕೆಂದರು.
ಇದನ್ನೂ ಓದಿ: ಶಾಸಕರ ಮಾರ್ಗದರ್ಶನದಲ್ಲಿ ನಗರಸಭೆಯಿಂದ ಚಳ್ಳಕೆರೆ ನಗರ ಅಭಿವೃದ್ದಿ: ಅಧ್ಯಕ್ಷೆ ಶಿಲ್ಪ ಮುರುಳೀಧರ
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ್, ನಗರ ಮಂಡಲ ಅಧ್ಯಕ್ಷ ಲೋಕೇಶ್, ಗ್ರಾಮಾಂತರ ಮಂಡಲ ಅಧ್ಯಕ್ಷ ನಾಗರಾಜ್, ಯುವ ಮುಖಂಡ ಡಾ.ಸಿದ್ದಾರ್ಥ, ಬಿಜೆಪಿ. ನಿಕಟ ಪೂರ್ವ ಜಿಲ್ಲಾಧ್ಯಕ್ಷ ಎ.ಮುರಳಿ, ನಾಯಕನಹಟ್ಟಿ ಮಂಡಲ ಅಧ್ಯಕ್ಷ ಮಲ್ಲೇಶ್, ಮೊಳಕಾಲ್ಮುರು ಮಂಡಲ ಅಧ್ಯಕ್ಷ ಕೆ.ಟಿ.ಶ್ರೀರಾಮ್‍ರೆಡ್ಡಿ, ಚಳ್ಳಕೆರೆ ಮಂಡಲ ಅಧ್ಯಕ್ಷ ಸುರೇಶ್ ಮಧುರೆ, ಹಿರಿಯೂರು ಮಂಡಲ ಅಧ್ಯಕ್ಷ ಅಭಿನಂದನ್ ಕೆ. ಜಿಲ್ಲಾ ಖಜಾಂಚಿ ಮಾಧುರಿ ಗಿರೀಶ್ , ವಕ್ತಾರ ನಾಗರಾಜ್‍ಬೇದ್ರೆ, ಎಸ್ಸಿ.ಮೋರ್ಚಾ ಪ್ರಧಾನ ಕಾರ್ಯದರ್ಶಿ ಪಾಂಡು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಡಿ.ರಮೇಶ್, ನವೀನ್ ಚಾಲುಕ್ಯ, ರತ್ನಮ್ಮ, ಕವನ, ಸುಮ, ಕವಿತ, ರೇಖ, ಪಾಪೇಶ್‍ನಾಯ್ಕ, ವೆಂಕಟೇಶ್,ಕಲ್ಲೇಶಯ್ಯ, ತಿಪ್ಪೇಸ್ವಾಮಿ ಛಲವಾದಿ ಪಾಲ್ಗೊಂಡಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252