Chitradurga news|nammajana.com|17-10-2024
ನಮ್ಮಜನ.ಕಾಂ, ಚಿತ್ರದುರ್ಗ: ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮಹರ್ಷಿ ವಾಲ್ಮೀಕಿ ರಾಮಾಯಣ (Valmiki Circle) ಮಹಾಕಾವ್ಯ ಸರ್ವಕಾಲಕ್ಕೂ ಪ್ರಸ್ತುತ. ರಾಮಾಯಣ ಮಹಾಕಾವ್ಯದ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಚಿತ್ರದುರ್ಗ ನಗರದ ಮದಕರಿನಾಯಕ ವೃತ್ತದ ಸಮೀಪದಲ್ಲಿರುವ ವಾಲ್ಮೀಕಿ ಭವನಕ್ಕೆ ಇನ್ನೂ ಅನುದಾನದ ಅವಶ್ಯಕತೆ ಇದೆ ಎಂದು ಸಮಾಜದ ಮುಖಂಡರು ಗಮನಕ್ಕೆ ತಂದಿದ್ದು, ಅನುದಾನ ಮಂಜೂರಾತಿಗೆ ಅಗತ್ಯ ಕ್ರಮವಹಿಸಿ, ಮುಂದಿನ ದಿನಗಳಲ್ಲಿ ವಾಲ್ಮೀಕಿ ಜಯಂತಿಯನ್ನು ವಾಲ್ಮೀಕಿ ಭವನದಲ್ಲಿಯೇ ಆಚರಿಸೋಣ ಎಂದು ತಿಳಿಸಿದ ಅವರು, (Valmiki Circle) ನಗರದ ಚಳ್ಳಕೆರೆ ಗೇಟ್‍ನಲ್ಲಿ ವಾಲ್ಮೀಕಿ ವೃತ್ತ ಎಂದು ನಾಮಕರಣ ಮಾಡಲು ನಗರಸಭೆಯಿಂದ ಕ್ರಮವಹಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಚಿತ್ರದುರ್ಗ | ವಾಲ್ಮೀಕಿ ಜಯಂತಿ ಅದ್ಧೂರಿ ಮೆರವಣಿಗೆ | Valmiki Jayanti
ಮುಂಬರುವ ಮಾರ್ಚ್ ಅಂತ್ಯದೊಳಗೆ ಸರ್ಕಾರದ ವತಿಯಿಂದ ದುರ್ಗೋತ್ಸವ ಆಚರಣೆ ಮಾಡಲಾಗುವುದು. ಈ ಬಾರಿ (Valmiki Circle) ದುಗೋತ್ಸವ ಆಚರಣೆ ಮಾಡುವ ಮೂಲಕ ದುರ್ಗದ ವೈಭವ, ಮದಕರಿ ನಾಯಕರ ಚರಿತ್ರೆಯನ್ನು ಇಡೀ ವಿಶ್ವಕ್ಕೆ ತಿಳಿಸುವ ಕೆಲಸ ದುಗೋತ್ಸವದಲ್ಲಿ ಆಗಲಿದೆ ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ತಿಳಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252