Chitradurga news|nammajana.com|22-6-2024
ನಮ್ಮಜನ.ಕಾಂ, ಚಿತ್ರದುರ್ಗ: ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ (Valmiki Corporation) 187 ಕೋಟಿ ರೂ.ಗಳ ಹಗರಣ ನಡೆದಿರುವುದರಿಂದ ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡುವಂತೆ ಜೂ.28 ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವ ಸಂಬಂಧ ಬಿಜೆಪಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿನ 187 ಕೋಟಿ ರೂ.ಗಳನ್ನು ಆಂಧ್ರದ ಚುನಾವಣೆಗೆ (Valmiki Corporation) ಸಾಗಿಸಲಾಗಿದೆ. ಇದರ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಹಮ್ಮಿಕೊಂಡಿರುವ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ರಾಜ್ಯದಿಂದ ಅನೇಕ ಮುಖಂಡರುಗಳು ಆಗಮಿಸಲಿದ್ದು ಹತ್ತು ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯಿದೆ ಎಂದರು.
ಇದನ್ನೂ ಓದಿ: Gold medal: ಅಂತರಾಷ್ಟೀಯ ಸೈನ್ಸ್ ಒಲಂಪಿಯಾಡ್‌ನಲ್ಲಿ SRS ವಿದ್ಯಾರ್ಥಿ ಧವನ್ ಎಸ್.ರೆಡ್ಡಿಗೆ ಚಿನ್ನದ ಪದಕ
ಬಿಜೆಪಿ. ಜಿಲ್ಲಾಧ್ಯಕ್ಷ ಎ.ಮುರಳಿ, ಮಾಜಿ ಶಾಸಕರುಗಳಾದ ಜಿ.ಹೆಚ್.ತಿಪ್ಪಾರೆಡ್ಡಿ, ಎಸ್.ತಿಪ್ಪೇಸ್ವಾಮಿ ಇವರುಗಳು ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಬಿಜೆಪಿ.ಮುಖಂಡರುಗಳಾದ ಕೆ.ಟಿ.ಕುಮಾರಸ್ವಾಮಿ, ಎಸ್ಟಿ.ಮೋರ್ಚಾ ಜಿಲ್ಲಾಧ್ಯಕ್ಷ ಶಿವಣ್ಣ, ದೇವರಾಜ್ ಹೊಸದುರ್ಗ, ನವೀನ್ ಚಳ್ಳಕೆರೆ, ಎಸ್ಟಿ.ಮೋರ್ಚಾ ಪದಾಧಿಕಾರಿಗಳು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದರು.
