Chitradurga news|nammajana.com|28-6-2024
ನಮ್ಮಜನ.ಕಾಂ, ಚಿತ್ರದುರ್ಗ: ರಾಜ್ಯ ಕಾಂಗ್ರೆಸ್ ಸರ್ಕಾರ ಇತಿಹಾಸದಲ್ಲಿಯೇ ಕಂಡರಿಯಂದಂತ ಭ್ರಷ್ಠಾಚಾರದಲ್ಲಿ ತೊಡಗಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ (Valmiki Corporation Scam) ಹೊಣೆ ಹೊತ್ತು ರಾಜಿನಾಮೆ ಕೊಡಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಬಿಜೆಪಿ. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಸಿದರು.
ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಸಂದರ್ಭದಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ ವಿಧಾನಸಭೆ ಚುನಾವಣೆ ಮುನ್ನ ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ ಐದು ಉಚಿತ ಗ್ಯಾರೆಂಟಿಗಳಿಗೆ ಹಣ ಸಾಕಾಗದ ಕಾರಣ ಕರ್ನಾಟಕ ವಾಲ್ಮೀಕಿ ಅಭಿವೃದ್ದಿ ನಿಗಮದ ಹಣ ಬಳಸಿಕೊಂಡಿದೆ. ಬೇನಾಮಿ ಖಾತೆಗಳನ್ನು ತೆರೆದು 187 ಕೋಟಿ ರೂ.ಗಳನ್ನು ವರ್ಗಾಯಿಸಿ ಅಲ್ಲಿಂದ ರಾಜ್ಯ ಸರ್ಕಾರ ಬೇರೆ ಬೇರೆ ಉದ್ದೇಶಗಳಿಗೆ ಖರ್ಚು ಮಾಡಿ ನೆರೆಯ ಆಂಧ್ರಕ್ಕೆ ಹಣ ರವಾನಿಸಿದೆ ಎಂದು ಆಪಾದಿಸಿದರು.
ಬಾರ್‍ನಲ್ಲಿ ಕುಳಿತು ಕುಡಿಯುವವರಿಗೂ ಹಣ ತಲುಪಿದೆ. ಇಂತಹ ಕಡು ಭ್ರಷ್ಟ ಸರ್ಕಾರಕ್ಕೆ ಕಿವಿ ಹಿಂಡಬೇಕಿದೆ ಎಂದರು.
ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕ ವಾಲ್ಮೀಕಿ ಅಭಿವೃದ್ದಿ (Valmiki Corporation Scam) ನಿಗಮಕ್ಕೆ ನೂರಾರು ಕೋಟಿ ರೂ.ಗಳನ್ನು ನೀಡಿದ್ದರು. ಆ ಹಣವನ್ನೆಲ್ಲಾ ಈಗಿನ ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ. ಎಸ್.ಐ.ಟಿ. ತನಿಖೆ ನಡೆಸುತ್ತಿದೆಯೇ ವಿನಃ ಸಚಿವ ನಾಗೇಂದ್ರಗೆ ಇದುವರೆವಿಗೂ ಒಂದು ನೋಟಿಸ್ ಕೊಟ್ಟಿಲ್ಲ. ಬೇರೆ ಬೇರೆ ರಾಜ್ಯಗಳಿಗೆ, ರಾಹುಲ್‍ಗಾಂಧಿಗೆ ಹಣ ಹೋಗಿದೆ. ಕರ್ನಾಟಕವನ್ನು ಎಟಿಎಂ. ಮಾಡಿಕೊಂಡಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಉಚಿತ ಗ್ಯಾರೆಂಟಿಗಳಿಗೆ ಹಣ ಒದಗಿಸಲು ಹೆಣಗಾಡುತ್ತಿದ್ದಾರೆ.
ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಹೆಸರು ಕೂಡ ಹಗರಣದಲ್ಲಿ ಕೇಳಿ ಬರುತ್ತಿದೆ. ರಾಜ್ಯದಲ್ಲಿ ಬರಗಾಲವಿದೆ. ರೈತರು ಕಂಗಾಲಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ (Valmiki Corporation Scam) ವಾಲ್ಮೀಕಿ ಅಭಿವೃದ್ದಿ ನಿಗಮದ ಅಧಿಕಾರಿ ಚಂದ್ರಶೇಖರನ್ ಡೆತ್‍ನೋಟ್‍ನಲ್ಲಿ ಸಚಿವರ ಹೆಸರು ಬರೆದಿದ್ದಾರೆ. ಎಸ್ಸಿ.ಪಿ. ಟಿಎಸ್ಸ್‍ಪಿ. ಹಣ ದುರುಪಯೋಗವಾಗಿದೆ. ಈ ನಿಟ್ಟಿನಲ್ಲಿ ವಾಲ್ಮೀಕಿ ಸಮುದಾಯಕ್ಕೆ ನ್ಯಾಯ ಕೊಡಿಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.
ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ನೇರ್ಲಗುಂಟೆ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವಾಲ್ಮೀಕಿ ಜನಾಂಗದ ಹಣವೇ ಬೇಕಿತ್ತ. 187 ಕೋಟಿ ರೂ.ಗಳನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ (Valmiki Corporation Scam) ಮಾಡಿಸಿಕೊಂಡು ಕಾಂಗ್ರೆಸ್ ಸರ್ಕಾರ ಭ್ರಷ್ಠಾಚಾರದಲ್ಲಿ ತೊಡಗಿದೆ. ಮುಖ್ಯಮಂತ್ರಿ ರಾಜಿನಾಮೆ ಕೊಡಬೇಕು ಅಲ್ಲಿಯವರೆಗೂ ನಮ್ಮ ಹೋರಾಟ ಇದ್ದೇ ಇರುತ್ತದೆ ಎಂದರು.
ಇದನ್ನೂ ಓದಿ: ಅನೈತಿಕ ಸಂಬಂಧ | ಗಂಡನ ಕೊಲ್ಲಲು ರಾಗಿ ಮುದ್ದೆಯಲ್ಲಿ ವಿಷ ಹಾಕಿದ ಪತ್ನಿ | Attempted murder
ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಮಾಜಿ ಶಾಸಕರುಗಳಾದ ಜಿ.ಹೆಚ್.ತಿಪ್ಪಾರೆಡ್ಡಿ, ಎಸ್.ವಿ.ರಾಮಚಂದ್ರಪ್ಪ, ಬಿಜೆಪಿ. ಎಸ್ಟಿ. ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು, ರಾಜ್ಯ ಕಾರ್ಯದರ್ಶಿ ಶರಣ್‍ತಾಳಿಕೆರೆ, ಎಸ್.ಲಿಂಗಮೂರ್ತಿ, ಉಮೇಶ್‍ಕಾರಜೋಳ, ಬಿಜೆಪಿ. ಜಿಲ್ಲಾಧ್ಯಕ್ಷ ಎ.ಮುರಳಿ, ಹನುಮಂತೆಗೌಡ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್‍ಯಾದವ್, ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ್, ಯುವ ಮುಖಂಡರುಗಳಾದ ಎಂ.ಸಿ.ರಘುಚಂದನ್, ಕುಮಾರಸ್ವಾಮಿ, ಜಿ.ಎಸ್.ಅನಿತ್‍ಕುಮಾರ್, ನಗರ ಮಂಡಲ ಅಧ್ಯಕ್ಷ ನವೀನ್ ಚಾಲುಕ್ಯ, ಡಾ.ಸಿದ್ದಾರ್ಥ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಮಾಧುರಿ ಗಿರೀಶ್, ಜಿ.ಟಿ.ಸುರೇಸ್‍ಸಿದ್ದಾಪರ, ಪಿ.ಸಂಪತ್‍ಕುಮಾರ್, ಬಾಳೆಕಾಯಿ ರಾಂದಾಸ್, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ವಕ್ತಾರ ನಾಗರಾಜ್‍ಬೇದ್ರೆ ಸೇರಿದಂತೆ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು, ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.