
Chitradurga news|nammajana.com|2-10-2024
ನಮ್ಮಜನ.ಕಾಂ, ಚಿತ್ರದುರ್ಗ:ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾ ಕೇಂದ್ರದಲ್ಲಿ ಇದೇ ಅಕ್ಟೋಬರ್ 17 ರಂದು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಈ ನಿಟ್ಟಿನಲ್ಲಿ (Valmiki Samaj) ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳುವಂತೆ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ (Valmiki Samaj) ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ಸಭೆಯಲ್ಲಿ ವಾಲ್ಮೀಕಿ ಜಯಂತಿಗಿಂತ ಮೊದಲು ಚಿತ್ರದುರ್ಗ ನಗರದ ಮದಕರಿ ವೃತ್ತದಲ್ಲಿ ನಿರ್ಮಿಸಲಾಗಿರುವ ವಾಲ್ಮೀಕಿ ಭವನ ಅವೈಜ್ಞಾನಿಕವಾಗಿ ನಿರ್ಮಾಣವಾಗಿದ್ದು, ಇಲ್ಲಿ ಯಾವುದೇ ಕಾರ್ಯಕ್ರಮ ಆಯೋಜನೆ ಮಾಡಲು ಸಾಧ್ಯವಾಗುತ್ತಿಲ್ಲ.ಈ (Valmiki Samaj) ಕುರಿತು ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗಿದೆ. ವಾಲ್ಮೀಕಿ ಭವನ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಹಸ್ತಾಂತರವಾಗಿಲ್ಲ. ಕೆಲವು ತಾಂತ್ರಿಕ ಸಮಸ್ಯೆಗಳು ಇದ್ದು, ಈ ಕುರಿತು ಸಂಬಂಧಪಟ್ಟವರು ಅಗತ್ಯ ಕ್ರಮ ವಹಿಸಬೇಕು ಎಂದು ತಾಲ್ಲೂಕು ನಾಯಕ ಸಮಾಜದ ಅಧ್ಯಕ್ಷ ಬಿ.ಕಾಂತರಾಜ್ ಅಸಮಾಧಾನ ವ್ಯಕ್ತಪಡಿಸಿದರು.
ಇದಕ್ಕೆ ದನಿಗೂಡಿಸಿದ ನಗರಸಭೆ ಸದಸ್ಯ ವೆಂಕಟೇಶ್, ಜಿಲ್ಲಾ ನಾಯಕ ಸಮಾಜದ ಅಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ, ವಾಲ್ಮೀಕಿ ಭವನ ಉಪಯೋಗಕ್ಕೆ ಬಾರದ ಸ್ಥಿತಿಯಲ್ಲಿದೆ ಎಂದು ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ನಗರದ ಮಧ್ಯಭಾಗದಲ್ಲಿರುವ ವಾಲ್ಮೀಕಿ ಭವನ ಯಾವ ಉದ್ದೇಶಕ್ಕೆ ನಿರ್ಮಾಣವಾಗಿದೆಯೋ ಅದು (Valmiki Samaj) ಸದುಪಯೋಗವಾಗಬೇಕು. ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಆಸಕ್ತಿವಹಿಸಿ ಸಂಬಂಧಪಟ್ಟವರ ಜೊತೆ ಚರ್ಚಿಸಿ, ಸಭೆ ನಡೆಸಿ, ತಕ್ಷಣವೇ ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಚಿತ್ರದುರ್ಗ ನಗರದ ಜೆಸಿಆರ್ 4ನೇ ಕ್ರಾಸ್, ಗಣೇಶ ದೇವಸ್ಥಾನ ಹತ್ತಿರ ಇರುವ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಾರ್ವಜನಿಕರ ಹಿತದೃಷ್ಠಿಯಿಂದ ನಗರದ ಬಿ.ಡಿ.ರಸ್ತೆಯ ಪ್ರವಾಸಿ ಮಂದಿರದ ಸಮೀಪ ಲಿಡ್ಕರ್ ಭವನಕ್ಕೆ ಸ್ಥಳಾಂತರಿಸಬೇಕು ಎಂದು ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಕ್ರಮವಹಿಸಿಲ್ಲ.
ಇದನ್ನೂ ಓದಿ: ಗ್ರಾಮ ಆಡಳಿತ ಅಧಿಕಾರಿ ಸಸ್ಪೆಂಡ್ | HIRIYUR NEWS
ವಾಲ್ಮೀಕಿ ಜಯಂತಿಯಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಉದ್ಘಾಟನೆ ಕಾರ್ಯ ಆಗಬೇಕು ಎಂದು ನಾಯಕ ಸಮಾಜದ ಮುಖಂಡರು (Valmiki Samaj) ಉಪವಿಭಾಗಾಧಿಕಾರಿ ಎಂ.ಕಾರ್ತಿಕ್‍ಗೆ ಮನವಿ ಮಾಡಿದರು.
ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲಾ ಕಚೇರಿ ಸ್ಥಳಾಂತರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಭರವಸೆ ನೀಡಿದರು.
