Chitradurga news|Nammajana.com|7-92-2025
ನಮ್ಮಜನ.ಕಾಂ, ಹೊಸದುರ್ಗ: ವೇದಾವತಿ ನದಿಯಲ್ಲಿ ಕಾಲುಜಾರಿ ಬಿದ್ದು ಶಿಕ್ಷಕನೋರ್ವ ಮೃತಪಟ್ಟ ಘಟನೆ ತಾಲೂಕಿನ ಕೆಲೋಡು ಗ್ರಾಮದಲ್ಲಿ ಗುರುವಾರ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮೃತಪಟ್ಟ ವ್ಯಕ್ತಿಯನ್ನು ತಾಲೂಕಿನ ಮತ್ತೊಡು ಗ್ರಾಮದ ಹೊತ್ತರಗೊಂಡನಹಳ್ಳಿ ಗ್ರಾಮದ ಲಕ್ಷಣ್ ನಾಯ್ಕ(55) ಎಂದು ಗುರುತಿಸಲಾಗಿದೆ. ಈತ ತಾಲೂಕಿನ ಮತ್ತೊಡು ಹೋಬಳಿಯ ಗುಡ್ಡದ ನೇರಲಕೆರೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ಸಲ್ಲಿಸುತ್ತಿದ್ದರು. ಶಾಲೆಗೆ ಮೂರು ದಿನ ರಜೆ ಹಾಕಿದ್ದ ಲಕ್ಷಣ್ ನಾಯ್ಕ ಅವರು, ಗುರುವಾರ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಹೋಗಿದ್ದರು.
ಕೆಲ್ಲೊಡಿನ ಚೌಡೇಶ್ವರಿ ದೇವಾಲಯಕ್ಕೆ ತೆರಳಿದ್ದ ವೇಳೆ ದೇವಸ್ಥಾನ ಹಿಂಭಾಗದ ವೇದಾವತಿ ನದಿಯಲ್ಲಿ ಕಾಲು ತೊಳೆಯಲು ಹೋಗಿ ಆಯತಪ್ಪಿ ನದಿಗೆ ಬಿದ್ದು ಸಾವನ್ನಪ್ಪಿದ್ದಾರೆ. ಕುಟುಂಬಸ್ಥರು ದೇವಸ್ಥಾನ ಹಾಗೂ ಸಂಬಂಧಿಕರ ಬಳಿ ವಿಚಾರಿಸಿದರೂ ಪತ್ತೆ ಆಗಿಲ್ಲ.
ಇದನ್ನೂ ಓದಿ: Challakere ನಗರಸಭೆಯ ಕೊನೆ ಅವಧಿಯ ಉಪಾಧ್ಯಕ್ಷೆಯಾಗಿ ಕವಿತಾ ವೀರೇಶ್ ಅವಿರೋಧ ಆಯ್ಕೆ
ಶನಿವಾರ ಮೃತದೇಹ ನದಿಯಲ್ಲಿ ತೇಲುತ್ತಿರುವುದನ್ನು ಸ್ಥಳೀಯ ಮೀನುಗಾರರು ಪೊಲೀಸರಿಗೆ ತಿಳಿಸಿದ್ದಾರೆ. ಈ ಬಗ್ಗೆ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
