Chitradurga news | nammajana.com | 17-07-2025
ನಮ್ಮಜನ.ಕಾಂ, ಮೊಳಕಾಲ್ಮುರು: ಕುಡಿಯುವ ನೀರಿನ ವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ಮ್ಯಾಸರಹಟ್ಟಿ ಗ್ರಾಮಸ್ಥರು ಬಿ.ಜಿ.ಕೆರೆ ಗ್ರಾಮ ಪಂಚಾಯಿತಿ ಕಚೇರಿ ಆವರಣಕ್ಕೆ ಜಾನುವಾರುಗಳನ್ನು ಕೂಡಿ ಹಾಕಿ ಪ್ರತಿಭಟನೆ(protest) ನಡೆಸಿದರು.
ಇದನ್ನೂ ಓದಿ: ದೇಶದಲ್ಲಿ ಭಾರತೀಯ ನ್ಯಾಯ ಸಂಹಿತೆ(BNS) ಕಾಯ್ದೆ ಬಳಿಕ ಕಳ್ಳತನ ಮಾಡಿದ ವ್ಯಕ್ತಿಗೆ ಶಿಕ್ಷೆ

ಗ್ರಾಮ ಹಾಗೂ ಸುತ್ತಮುತ್ತಲ ಜಾನುವಾರು, ಕುರಿ, ಮೇಕೆಗಳನ್ನು ಮೇಯಿಸಲು ಅರಣ್ಯ ಪ್ರದೇಶದಲ್ಲಿರುವ ಅರವಿನದೊಡ್ಡಿಗೆ ಹೊಡೆದುಕೊಂಡು ಹೋಗಲಾಗುತ್ತಿದೆ. 10,000 ಕುರಿ, ಮೇಕೆ, 3,000 ಜಾನುವಾರುಗಳು ಇಲ್ಲಿವೆ. ಕುಡಿಯಲು 10ಕ್ಕೂ ಹೆಚ್ಚು ತೊಟ್ಟಿಗಳನ್ನು ನಿರ್ಮಿಸಲಾಗಿದೆ. ಆದರೆ ನಿರ್ವಹಣೆ ಇಲ್ಲದೇ ಎಲ್ಲ ತೊಟ್ಟಿಗಳೂ ಒಡೆದು ಹೋಗಿದ್ದು ನೀರು ನಿಲ್ಲುತ್ತಿಲ್ಲ ಎಂದು ದೂರಿದರು.
ದುರಸ್ತಿಗಾಗಿ(protest) ಹಲವು ಬಾರಿ ಮನವಿ ಮಾಡಲಾಗಿದೆ. ಯಾವುದೇ ಕ್ರಮ ಕೈಗೊಳ್ಳದ ಕಾರಣ ಜಾನುವಾರು ಸಹಿತ ಬಂದು ಪ್ರತಿಭಟನೆ ಮಾಡಲಾಗುತ್ತಿದೆ ಎಂದು ಹೇಳಿದರು.
ಸ್ಥಳಕ್ಕೆ ಬಂದ ತಾಲ್ಲೂಕು ಪಂಚಾಯಿತಿ ಇಒ ಹನುಮಂತಪ್ಪ ಸ್ಥಳ ಭೇಟಿ ಮಾಡಿ ತೊಟ್ಟಿಗಳನ್ನು ಪರಿಶೀಲಿಸಿ, ವಾರದ ಒಳಗಾಗಿ ಸಮಸ್ಯೆ ಸರಿಪಡಿಸಲಾಗುವುದು’ ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು.
ಇದನ್ನೂ ಓದಿ: ನಗರರಸಭೆ ಕಾರ್ಯಚರಣೆ | ಸಾರ್ವಜನಿಕ ಆಸ್ಪತ್ರೆಯ ಕಾಂಪೌಂಡ್ ಬಳಿಯ ಅಂಗಡಿಗಳ ಎತ್ತಂಗಡಿ
ಕುಂಟ ಮಲ್ಲಯ್ಯ, ಕುರಿ ಮುತ್ತಯ್ಯ, ಸೂರಯ್ಯ, ಓಬಯ್ಯ, ಕಾಮಯ್ಯ, ಪಾಲಯ್ಯ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252