Chitradurga news|nammajana.com|22-7-2024
ನಮ್ಮಜನ.ಕಾಂ, ಚಳ್ಳಕೆರೆ: ಇಲ್ಲಿನ ಗಾಂಧಿನಗರದ ತಿಮ್ಮಪ್ಪಸ್ವಾಮಿ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿದ್ದ (Wind Challakere) ಮರವೊಂದು ಮಧ್ಯಾಹ್ನ ಬೀಸಿದ ಗಾಳಿಗೆ ಮುರಿದುಬಿದ್ದ ಪರಿಣಾಮವಾಗಿ ಮರದ ಕೊಂಬೆಗಳು ವಿದ್ಯುತ್ ವೈರ್ ಮೇಲೆ ರಭಸವಾಗಿ ಬಿದ್ದ ಪರಿಣಾಮವಾಗಿ ಎರಡು ವಿದ್ಯುತ್ ಕಂಬಗಳು ತುಂಡಾಗಿ ಬಿದ್ದು ಎಲ್ಲೂ ಸಹ ವಿದ್ಯುತ್ ವೈರ್ ತುಂಡಾಗದ ಕಾರಣ ಯಾವುದೇ ಪ್ರಾಣಾಪಾಯವಾಗಿಲ್ಲ.
ಮನೆಯ ಮುಂದೆ ನಿಲ್ಲಿಸಿದ್ದ ವೆಂಕಟೇಶ್ ಎಂಬುವವರಿಗೆ (Wind Challakere) ಸೇರಿದ ಹೊಸ ಆಟೋರಿಕ್ಷಾದ ಮೇಲೆ ವಿದ್ಯುತ್ ಕಂಬ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಆಟೋರಿಕ್ಷಾ ಜಖಂಗೊಂಡಿದೆ.

ಸುದ್ದಿ ತಿಳಿದ ಕೂಡಲೇ ಬೆಸ್ಕಾಂ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ತುರ್ತಾಗಿ ಆಗಮಿಸಿ ತುಂಡಾಗಿ ಬಿದ್ದ ವಿದ್ಯುತ್ (Wind Challakere) ಕಂಬಗಳನ್ನು ಮೇಲೆತ್ತಿ ಎರಡು ನೂತನ ಕಂಬಗಳನ್ನು ಪುನಃ ಅದೇ ಸ್ಥಳದಲ್ಲಿ ಹಾಕಿದ್ದಾರೆ. ಈ ಅವಘಡಕ್ಕೆ ಜೋರಾಗಿ ಬೀಸಿದ ಗಾಳಿಕಾರಣ ಎನ್ನಲಾಗಿದೆ.
ಇದನ್ನೂ ಓದಿ: CHANNAGIRI ADIKE RATE: ಚನ್ನಗಿರಿ, ಭೀಮಸಮುದ್ರ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ರೇಟ್
ದಿಢೀರನೆ ಮರ ಹಾಗೂ ಕಂಬ ಬಿದ್ದ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳು ಗಾಬರಿಗೊಂಡು ಮನೆಯಿಂದ ಹೊರಗೆ (Wind Challakere) ಆಗಮಿಸಿದ್ಧಾರೆ. ಕೂಡಲೇ ಬೆಸ್ಕಾಂ ಇಲಾಖೆ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಿ ತ್ವರಿತಗತಿಯಲ್ಲಿ ಕಂಬಗಳನ್ನು ಬದಲಾಯಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252