Chitradurga news|nammajana.com|21-6-2024
ನಮ್ಮಜನ.ಕಾಂ, ಚಿತ್ರದುರ್ಗ: ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಯೋಗ (Yoga Day 2024) ದಿನಾಚರಣೆಯನ್ನು ಆಚರಿಸಲಾಯಿತು.
ಪತಂಜಲಿ ಯೋಗ ಸಮಿತಿಯ ಸಹಯೋಗದೊಂದಿಗೆ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್ ಯೋಗದಿಂದ ಮಾನಸಿಕ ಮತ್ತು ದೈಹಿಕವಾಗಿ (Yoga Day 2024) ಆರೋಗ್ಯವಾಗಿರಬಹುದು. ಹಾಗಾಗಿ ಪ್ರತಿಯೊಬ್ಬರು ದಿನಕ್ಕೆ ಒಂದು ಗಂಟೆಯಾದರೂ ಯೋಗಾಭ್ಯಾಸ ಮಾಡುವುದು ಒಳ್ಳೆಯದು ಎಂದು ಯೋಗದ ಮಹತ್ವ ತಿಳಿಸಿದರು.
ಯೋಗವು ಸರ್ವ ರೋಗಗಳಿಗೆ ಪ್ರಕೃತಿ ಚಿಕಿತ್ಸೆ ಇದ್ದಂತೆ, ಯೋಗವನ್ನು ಎಲ್ಲಾ ವಯಸ್ಸಿನವರು ಮಾಡಿದರೆ ಉತ್ತಮ ಫಲಿತಾಂಶ ಲಭಿಸುತ್ತದೆ. ಏಕೆಂದರೆ ಯೋಗಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಪ್ರತಿ ದಿನ ಯೋಗಭ್ಯಾಸ (Yoga Day 2024) ದೇಹದ ಅಲಸ್ಯ ಕಡಿಮೆ ಮಾಡಿ ಸದಾ ಚಟುವಟಿಕೆಯಿಂದ ಕೂಡಿರಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ: Adike prices fall: ರಾಶಿ ಅಡಿಕೆ ರೇಟ್ ಇಳಿಕೆ | 21 ಜೂನ್ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ಬೆಲೆ?
ನಾಲ್ಕು ಸಾವಿರ ವಿದ್ಯಾರ್ಥಿಗಳು ಯೋಗ ಪ್ರದರ್ಶಿಸಿದರು.
ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಸಿಬ್ಬಂದಿಗಳು ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ್ದರು.