Chitradurga news|nammajana.com|21-6-2024
ನಮ್ಮಜನ.ಕಾಂ, ಚಿತ್ರದುರ್ಗ: ಸರ್ವ ರೋಗ ನಿವಾರಣೆಗೂ ಯೋಗ ರಾಮಬಾಣವಿದ್ದಂತೆ (Yoga Day Chitradurga 2024) ಎಂದು ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಕಾರ್ಯದರ್ಶಿ ಡಾ.ಕೆ.ಎಂ.ವೀರೇಶ್ ಹೇಳಿದರು.
ಬಾಪೂಜಿ ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರ ಅಂತರಾಷ್ಟ್ರೀಯ ಯೋಗ ದಿನಾಚರಣೆ (Yoga Day Chitradurga 2024) ಉದ್ಗಾಟಿಸಿ ಮಾತನಾಡಿದರು.

ಯೋಗ ಜೂ.21 ಕ್ಕೆ ಮಾತ್ರ ಸೀಮಿತವಾಗಬಾರದು. ಪ್ರತಿದಿನವೂ ಸ್ವಲ್ಪ ಸಮಯವನ್ನು ಯೋಗಕ್ಕೆ ಮೀಸಲಿಟ್ಟಾಗ ಮಾತ್ರ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದರು.
ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ನಿರ್ದೇಶಕ ಕೆ.ಎಂ.ಚೇತನ್ ಮಾತನಾಡಿ ಚಿಕ್ಕಂದಿನಿಂದಲೇ ಮಕ್ಕಳಿಗೆ ಯೋಗ, ಧ್ಯಾನ, ಪ್ರಾಣಾಯಾಮದ ಮಹತ್ವವನ್ನು ತಿಳಿಸಬೇಕು.
ಇದನ್ನೂ ಓದಿ: Pratibha Puraskara: ವಿದ್ಯಾರ್ಥಿಗಳು ಜ್ಞಾನ ಸಂಪಾದನೆಗೆ ಮುಂದಾಗಬೇಕು: ಟಿ.ರಘುಮೂರ್ತಿ
ವಿಜ್ಞಾನ-ತಂತ್ರಜ್ಞಾನದಲ್ಲಿ ಒತ್ತಡದ ಜೀವನದಲ್ಲಿ ಬದುಕುತ್ತಿರುವ ಎಲ್ಲರಿಗೂ ಯೋಗ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಸಂಸ್ಥೆಯ ಮುಖ್ಯಸ್ಥರಾದ ಮೇಘನ ಚೇತನ್, ದೈಹಿಕ ಶಿಕ್ಷಕ ಕೆ.ಎಂ.ಮಲ್ಲಿಕಾರ್ಜುನ್, ಯೋಗಪಟು ಸುನಿಲ್‍ಕುಮಾರ್, ಎಲ್ಲಾ ವಿಭಾಗಗಳ ಮುಖ್ಯಸ್ಥರು ಹಾಗೂ ಶಿಕ್ಷಕ ವೃಂದದವರು ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252