

Chitradurga News | Nammajana. Com |21-4-2024

ನಮ್ಮಜನ.ಕಾಂ.ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಎಂ ಕಾರಜೋಳ ಪರ ಲೋಕ ಅಖಾಡಕ್ಕೆ ಇಳಿದು ಚುನಾವಣಾ ಮತಯಾಚನೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಚಿತ್ರದುರ್ಗದಲ್ಲಿ ಆಯೋಜಿಸಬೇಕಾಗಿದ್ದ ರೋಡ್ ಶೋ ಪ್ಲಾನ್ ರದ್ದಾಗಿದೆ. ಆದರೆ ಅದೇ ದಿನದಂದು ಹಳೆ ಮಾಧ್ಯಮಿಕ ಶಾಲಾ ಮೈದಾನದಲ್ಲಿ ಸಮಾವೇಶ ನಡೆಸಲಾಗುತ್ತದೆ ವಿಧಾನ ಪರಿಷತ್ ಸದಸ್ಯನಾಗಿ ಕೆ.ಎಸ್.ನವೀನ್ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಪರವಾಗಿ ಹಲವು ದಿನಗಳಿಂದ ಕೋಟೆ ನಾಡಿನ ಸಂಗೋಳ್ಳಿ ರಾಯಣ್ಣ ಸರ್ಕಲ್ ನಿಂದ 24 ರ ಬೆಳಗ್ಗೆ ಬೆಳಿಗ್ಗೆ ರೋಡ್ ಶೋ ನಡೆಯಬೇಕಿತ್ತು.
ಇದನ್ನೂ ಓದಿ: ಈ ಎರಡು ದಿನ ಸಂತೆ, ಜಾತ್ರೆ, ಉತ್ಸವ ನಿಷೇಧ
ಕಾರಣಾಂತರದಿಂದ ಅಂದು ಬೆಳಿಗ್ಗೆ 11ಕ್ಕೆ ಹಳೆ ಮಾಧ್ಯಮಿಕ ಶಾಲಾ ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ಯೋಗಿ ಆದಿತ್ಯನಾಥ್ ಭಾಗವಹಿಸಲಿದ್ದಾರೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

