
Chitradurga news|nammajana.com|2-3-2025
ನಮ್ಮಜನ.ಕಾಂ, ಚಿತ್ರದುರ್ಗ: ಬೇಸಿಗೆ ಕಾಲದಲ್ಲಿ ಜಿಲ್ಲೆಯ ಗ್ರಾಮೀಣ ಹಾಗೂ ನಗರ, ಪಟ್ಟಣಗಳಲ್ಲಿನ ಜನರಿಗೆ ಕುಡಿಯುವ ನೀರಿನ ಯಾವುದೇ ತೊಂದರೆಯಾಗದಂತೆ, ಈಗಿನಿಂದಲೇ (Zilla Panchayat KDP) ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ 83 ಗ್ರಾಮ ಪಂಚಾಯತಿ ವ್ಯಾಪ್ತಿಯ ಸುಮಾರು 236 ಗ್ರಾಮಗಳನ್ನು ಸಮಸ್ಯಾತ್ಮಕ ಗ್ರಾಮಗಳೆಂದು ಗುರುತಿಸಲಾಗಿದ್ದು, ಈ ಗ್ರಾಮಗಳ ವ್ಯಾಪ್ತಿಯಲ್ಲಿ ಸರ್ಕಾರದ ನಿರ್ದೇಶನದಂತೆ ಖಾಸಗಿ ಬೋರ್‍ವೆಲ್ ಹಾಗೂ ಪರ್ಯಾಯ ನೀರಿನ ಮೂಲಗಳ ಬಗ್ಗೆ ಗುರುತಿಸಿ, ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಯೋಜಿಸಲಾಗುತ್ತಿದೆ.
ಜಿಲ್ಲೆಯಲ್ಲಿ ಒಟ್ಟು 1056 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಈ ಪೈಕಿ 165 ಘಟಕಗಳು ಕೆಟ್ಟಿದ್ದು, ಇವುಗಳನ್ನು ದುರಸ್ತಿಗೊಳಿಸಬೇಕಿದೆ ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ (Zilla Panchayat KDP) ಅಭಿಯಂತರ ಬಸವನಗೌಡ ಪಾಟೀಲ್ ಅವರು ಮಾಹಿತಿ ನೀಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ವೀರೇಂದ್ರ ಪಪ್ಪಿ ಅವರು ಕೇವಲ 165 ಆರ್.ಒ ಘಟಕಗಳು ಮಾತ್ರ ಕೆಟ್ಟಿರುವುದು ಎಂಬುದಾಗಿ ತಿಳಿಸುತ್ತಿದ್ದು, ವಾಸ್ತವದಲ್ಲಿ ಇನ್ನೂ ಹೆಚ್ಚಿನ ಘಟಕಗಳು ಕೆಟ್ಟಿವೆ ಎಂದರು.
ಹೊಸದುರ್ಗ ಶಾಸಕ ಬಿ.ಜಿ. ಗೋವಿಂದಪ್ಪ ಮಾತನಾಡಿ, ಗ್ರಾಮೀಣ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಹಳ್ಳಿಗಳಿಗೆ ಭೇಟಿ ನೀಡುತ್ತಿಲ್ಲ, ಶಾಸಕರುಗಳಿಗೆ ಯಾವುದೇ ಮಾಹಿತಿ ಕೊಡುತ್ತಿಲ್ಲ, ಹೀಗಾದರೆ ಮುಂಬರುವ ಸಮಸ್ಯೆಗಳನ್ನು ನಾವು ಯಾವ ರೀತಿ ಎದುರಿಸಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರು, ಅಧಿಕಾರಿಗಳು ಕ್ಷೇತ್ರ ಮಟ್ಟದಲ್ಲಿ ಹಳ್ಳಿಗಳಿಗೆ ಖುದ್ದು ತೆರಳಿ, ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಅರಿಯುವ ಹಾಗೂ ಆಯಾ ಕ್ಷೇತ್ರ ಶಾಸಕರುಗಳೊಂದಿಗೆ ಚರ್ಚಿಸಿ ವಾಸ್ತವತೆ ತಿಳಿದುಕೊಳ್ಳುವ ಕಾರ್ಯ ಮಾಡಬೇಕು ಎಂದರು.
ಶಾಸಕ ರಘುಮೂರ್ತಿ ಅವರು, ಆರ್.ಒ. ಘಟಕಗಳನ್ನು ಅನುಷ್ಠಾನಗೊಳಿಸಿದ ಬಳಿಕ, ಅವುಗಳನ್ನು ಸಂಬಂಧಿಸಿದ ಗ್ರಾ.ಪಂ. ಗಳಿಗೆ ಹಸ್ತಾಂತರ ಮಾಡಬೇಕು, ಆದರೆ ಅಧಿಕಾರಿಗಳು ಈ ಕೆಲಸ ಮಾಡುತ್ತಿಲ್ಲ ಎಂದು ದೂರಿದರು.
ಇದನ್ನೂ ಓದಿ: Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ?
ಸಚಿವರು ಮಾತನಾಡಿ, ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಜಿಲ್ಲೆಯ ಯಾವುದೇ ಗ್ರಾಮ, ನಗರ, ಪಟ್ಟಣಗಳಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ತೊಂದರೆಯಾದರೆ, ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು. ಹೀಗಾಗಿ ಈಗಿನಂದಲೇ ಪರಿಹಾರ ಕಾರ್ಯಗಳನ್ನು ಯೋಜಿಸಿ, ಕ್ರಿಯಾ ಯೋಜನೆ ಸಿದ್ಧಪಡಿಸಿಕೊಳ್ಳಬೇಕು, ಜೆಜೆಎಂ (Zilla Panchayat KDP) ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದರು.
