Chitradurga news|Nammajana.com|8-9-2025
ನಮ್ಮಜನ.ಕಾಂ, ಚಿತ್ರದುರ್ಗ: ಕೆ.ಡಿ.ಪಿ ಪ್ರಗತಿ ಪರಿಶೀಲನಾ (ZP KDP) ಸಭೆಯಲ್ಲಿ ನಗರದ ಜಿಲ್ಲಾಸ್ಪತ್ರೆ ಅವ್ಯವಸ್ಥೆ ಬಗ್ಗೆ ತೀವ್ರ ಅಸಮಧಾನ ವ್ಯಕ್ತವಾಯಿತು.

ಸಚಿವ ಡಿ.ಸುಧಾಕರ್ ಮಾತನಾಡಿ ಜಿಲ್ಲಾಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಿಕೊಂಡಿಲ್ಲ. ಶವ ಪರೀಕ್ಷೆ ಸ್ಥಳದಲ್ಲಿ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿಯಿದೆ.ಡಿ.ಹೆಚ್.ಓ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕರು ಕರ್ತವ್ಯದಲ್ಲಿ ಸಂಪೂರ್ಣ (ZP KDP) ವಿಫಲರಾಗಿದ್ದಾರೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಇದೇ ವೇಳೆ ಜಿಲ್ಲಾಸ್ಪತ್ರೆ ಸಿಬ್ಬಂದಿ ಸಾಮೂಹಿಕವಾಗಿ ರಜೆಯ ಮೇಲೆ ತೆರಳಿದ ವಿಷಯ ಚರ್ಚೆಗೆ ಗ್ರಾಸವಾಯಿತು. ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಮಾತನಾಡಿ, ಪ್ರಾಥಮಿಕ ವರದಿ ಆಧಾರದಲ್ಲಿ ಕೆಲ ಸಿಬ್ಬಂದಿ ರಜೆ ಅರ್ಜಿ ನೀಡದೆ (ZP KDP) ಪ್ರವಾಸಕ್ಕೆ ತೆರಳಿದ್ದಾರೆ.
ಆರೋಪ ಕೇಳಿ ಬಂದ ನಂತರ ರಜೆ ಅರ್ಜಿಗಳನ್ನು ಸೃಷ್ಠಿಸಿ ದಾಖಲೆಗಳನ್ನು ತಿದ್ದುವ ಕೆಲಸ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ರಜೆ ಅರ್ಜಿಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಗೆ ಕಳುಹಿಸಿ ಸಹಿ ಹಾಗೂ ಇತರೆ ವಿಷಯಗಳ ಸತ್ಯಾಸತ್ಯೆಯನ್ನು ಪರಿಶೀಲಿಸಲಾಗುವುದು.
ಒಂದೊಮ್ಮೆ ರಜೆ ಅರ್ಜಿ ವಿಚಾರದಲ್ಲಿ ಅಕ್ರಮ ಮಾಡಿರುವುದು ಕಂಡುಬಂದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಸಿದರು. ತಾವು ಚಿತ್ರದುರ್ಗದಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯಲ್ಲಿ ಜಿಲ್ಲಾಸ್ಪತ್ರೆ ಸ್ವಚ್ಛತೆ ಹಾಗೂ ಉತ್ತಮ ಸೇವೆಗೆ ರಾಜ್ಯದಲ್ಲಿಯೇ ಮೊದಲ ಸ್ಥಾನವನ್ನು ಸತತ ಎರೆಡು ಬಾರಿ ಗಿಟ್ಟಿಸಿಕೊಂಡಿತ್ತು. ಆದರೆ ಈಗ ಪರಿಸ್ಥಿತಿ ತುಂಬಾ ಹದಗೆಟ್ಟಿದೆ. ಜಿಲ್ಲಾ ಶಸ್ತ್ರಚಿಕತ್ಸಕರು ಹೊರಗುತ್ತಿಗೆ ನೌಕರರ ವೇತನವನ್ನು ಸರಿಯಾದ ಸಂದರ್ಭಕ್ಕೆ ನೀಡುತ್ತಿಲ್ಲ ಎನ್ನುವ ಆರೋಪಗಳು ಕೇಳಿ ಬಂದಿವೆ ಎಂದರು.
ಶಾಸಕ ಡಾ.ಎಂ.ಚಂದ್ರಪ್ಪ ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ಜಿಲ್ಲೆಯಲ್ಲಿನ ಗಣಿ ಕಂಪನಿಗಳ ಸಿ.ಎಸ್.ಆರ್ ನಿಧಿಯಡಿ ಸಾಕಷ್ಟು ಉಪಕರಣಗಳನ್ನು ಜಿಲ್ಲಾಸ್ಪತ್ರೆಗೆ ನೀಡಲಾಗಿದೆ. ಈ ಉಪಕರಣಗಳಿಗೆ ಬಿಲ್ ಹೊಂದಿಸಿ (ZP KDP) ಡಿ.ಎಂ.ಎಫ್ ಅನುದಾನದಡಿ ಖರೀದಿಸಲಾಗಿದೆ ಎಂದು ಲೆಕ್ಕ ತೋರಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳು ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ: ಚಳ್ಳಕೆರೆ ತಾಲ್ಲೂಕು ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಿ: ಟಿ.ರಘುಮೂರ್ತಿ | Chitradurga ZP ಕೆಡಿಪಿ
ರಾಜ್ಯ ಸರ್ಕಾರ ಕೋವಿಡ್ ಅಕ್ರಮಗಳ ತನಿಖೆಗೆ ನ್ಯಾಯಮೂರ್ತಿ ಮೈಕಲ್ ಖುನ್ಹಾ ನೇತೃತ್ವದಲ್ಲಿ ತನಿಖಾ ನಿಯೋಗ ನೇಮಿಸಿದೆ. ಈಗಾಗಲೇ ಜಿಲ್ಲಾಸ್ಪತ್ರೆಯ ದಾಸ್ತನು ವಹಿಗಳನ್ನು ನಿಯೋಗಕ್ಕೆ (ZP KDP) ಹಸ್ತಾಂತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.
